ಕೋಲಾರ: ಮರಕ್ಕೆ ಕಾರು ಡಿಕ್ಕಿಯಾದ ಪರಿಣಾಮ, ಕಾರಿನಲ್ಲಿದ್ದಂತ ಇಬ್ಬರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ನಿಧನರಾದ್ರೇ, ಮತ್ತೆ ಮೂವರು ಗಾಯಗೊಂಡಿರೋ ಘಟನೆ ಕೋಲಾರದ ಷಾಪೂರ ಬಳಿಯಲ್ಲಿ ನಡೆದಿದೆ.
ಕನ್ನಡಕ್ಕೆ ಅವಮಾನ ಮಾಡಿದ ಅಂಚೆ ಸಿಬ್ಬಂದಿ ಅಮಾನತ್ತಿಗೆ ಸಾಹಿತ್ಯ ಪರಿಷತ್ ಅಧ್ಯಕ್ಷರ ಆಗ್ರಹ
ಕೋಲಾರ ತಾಲೂಕಿನ ಷಾಪೂರ ಬಳಿಯಲ್ಲಿ ಇಂದು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಂತ ಸ್ನೇಹಿತರಿದ್ದಂತ ಕಾರೊಂದು ಮರಕ್ಕೆ ಡಿಕ್ಕಿಯಾಗಿ ಚಾಲಕ ವಿಮಲ್ (27) ಹಾಗೂ ಶರೀನ್ (22) ಗಂಭೀರವಾಗಿ ಗಾಯಗೊಂಡಿದ್ದರು.
ಗಾಯಾಳುಗಳನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದ್ರೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ವಿಮಲ್ ಹಾಗೂ ಶರೀನ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.
ಇನ್ನೂ ಇದೇ ಘಟನೆಯಲ್ಲಿ ಗಾಯಗೊಂಡಿರುವಂತ ಹರ್ಷಿತಾ, ಡೇವಿಡ್ ಹಾಗೀ ವಿಮೋನಿಯಲ್ ಗೆ ಚಿಕಿತ್ಸೆ ಮುಂದುವರೆಸಲಾಗಿದೆ. ಈ ಎಲ್ಲರು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಚೆನ್ನೈನಿಂದ ಬಾಡಿಗೆ ಕಾರು ಪಡೆದು, ಬೆಂಗಳೂರಿಗೆ ಆಗಮಿಸುತ್ತಿದ್ದ ವೇಳೆಯಲ್ಲಿ ಈ ಅಪಘಾತ ನಡೆದಿದೆ. ಈ ಸಂಬಂಧ ಕೋಲಾರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.