ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕು ಪಡೆದಿದೆ. ಎಲ್ಲೆಡೆ ಆರ್ಭಟಿಸುತ್ತಿದ್ದು, ಧಾರಾಕಾರ ಮಳೆಯಿಂದಾಗಿ ರಾಜ್ಯದಲ್ಲಿ ಇಬ್ಬರು ಬಲಿಯಾಗಿರುವುದಾಗಿ ತಿಳಿದು ಬಂದಿದೆ.
ರಾಜ್ಯದ ಹಲೆವೆಡೆ ಭಾರೀ ಮಳೆಯಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಆರ್ಭಟಕ್ಕೆ ಇಬ್ಬರು ಬಲಿಯಾಗಿದ್ದಾರೆ. ಸಾಗರ ಹಾಗೂ ಕಡೂರು ತಾಲ್ಲೂಕಿನಲ್ಲಿ ಮಳೆಯ ಆರ್ಭಟದಿಂದ ಜನ ಜೀವನ ಅಸ್ತವ್ಯಸ್ಥಗೊಂಡಿದೆ.
ಕೊಪ್ಪಳ, ವಿಜಯನಗರ, ಬಳ್ಳಾರಿ ಜಿಲ್ಲೆಯಲ್ಲೂ ವರುಣ ಆರ್ಭಟಿಸುತ್ತಿದ್ದು, ಧಾರಾಕಾರ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡು, ಕೆರೆ ಕಟ್ಟೆಯಂತಾಗಿವೆ. ಹರಪನಹಳ್ಳಿ ತಾಲ್ಲೂಕಿನ ಹೊಸಹಳ್ಳಿಯಲ್ಲಿ ಸೇತುವೆ ಬಳಿ ನೀರಿನಲ್ಲಿ ಕೊಚ್ಚು ಹೋಗುತ್ತಿದ್ದಂತ ವ್ಯಕ್ತಿಯೊಬ್ಬರನ್ನು ರಕ್ಷಿಸಲಾಗಿದೆ.