ರಾಣೆಬೆನ್ನೂರು: ಇಲ್ಲಿನ ಚಳಗೇರಿ ಟೋಲ್ ಬಳಿಯಲ್ಲಿ ಆಟೋ ಹಾಗೂ ಕ್ಯಾಂಟರ್ ನಡುವೆ ಭೀಕರ ಅಪಘಾತ ಉಂಟಾಗಿದೆ. ಈ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿ ಟೋಲ್ ಬಳಿಯಲ್ಲಿ ಆಟೋ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಆಟೋದಲ್ಲಿ ಪ್ರಯಾಣಿಸುತ್ತಿದ್ದಂತ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನುಳಿದಂತ ನಾಲ್ವರ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ.
ಆಟೋ-ಕ್ಯಾಂಟರ್ ಅಪಘಾತದಲ್ಲಿ ಗಾಯಗೊಂಡಿರುವಂತ ಗಾಯಾಳುಗಳನ್ನು ರಾಣೆಬೆನ್ನೂರು ತಾಲ್ಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ರಾಣೆಬೆನ್ನೂರು ಗ್ರಾಮಾಂತರ ಠಾಣೆಯ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
BREAKING: ರೇಣುಕಾಸ್ವಾಮಿ ಕೊಲೆ ಕೇಸ್: ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್
ದಾವಣಗೆರೆಯಲ್ಲಿ ಜೈಲು ಶಿಕ್ಷೆಯ ಭಯದಿಂದ ‘ಕೋರ್ಟ್’ನಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಆರೋಪಿ