ಉತ್ತರ ಕನ್ನಡ: ಜಿಲ್ಲೆಯಲ್ಲಿ ಪ್ರವಾಸಕ್ಕೆ ತೆರಳಿದ್ದಂತ ಖಾಸಗಿ ಬಸ್ ಒಂದು ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಹಲವರು ಗಾಯಗೊಂಡಿರುವಂತ ಘಟನೆ ನಡೆದಿದೆ.
ಗೌರಿಬಿನೂರಿನಿಂದ ಧರ್ಮಸ್ಥಳಕ್ಕೆ 53 ಜನರು ಖಾಸಗಿ ಬಸ್ ನಲ್ಲಿ ಪ್ರವಾಸಕ್ಕೆ ತೆರಳಿದ್ದರು. ಧರ್ಮಸ್ಥಳದ ಜೊತೆಗೆ ವಿವಿಧ ಪ್ರವಾಸಿ ತಾಣಗಳಿಗೂ ಭೇಟಿ ನೀಡಿದ್ದರು. ಇಂದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸುಳೆಮುರ್ಕಿಯಲ್ಲಿ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದರಿಂದಾಗಿ ತುಮಕೂರಿನ ಲೋಕೇಶ್ ಹಾಗೂ ಚಿಕ್ಕಬಳ್ಳಾಪುರದ ರುದ್ರೇಶ್ ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಅಪಘಾತದಲ್ಲಿ ಗೌರಿಬಿದನೂರಿನ ರಜನಿ ಎಂಬುವರ ಕೈ ಕಟ್ ಆಗಿರೋದಾಗಿ ತಿಳಿದು ಬಂದಿದೆ.
ಈ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗದ ಮೆಗ್ಗಾನ್ ಹಾಗೂ ಹೊನ್ನಾವರ ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದೆ. ಈ ಸಂಬಂಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋವಿಶೀಲ್ಡ್ ಬಗ್ಗೆ ಯಾವುದೇ ಸುತ್ತೋಲೆ ಹೊರಡಿಸಿಲ್ಲ: ಸ್ಪಷ್ಟನೆ ನೀಡಿದ ಆರೋಗ್ಯ ಇಲಾಖೆ
ರಾಹುಲ್, ಲಾಲು ಹೆಸರನ್ನು ಹೊಂದಿರುವವರನ್ನು ಚುನಾವಣೆಯಲ್ಲಿ ಸ್ಪರ್ಧಿಸದಂತೆ ತಡೆಯಲು ಸಾಧ್ಯವಿಲ್ಲ; ಸುಪ್ರೀಂ ಕೋರ್ಟ್