BREAKING: ಉತ್ತರ ಕನ್ನಡದಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವು, ಹಲವರಿಗೆ ಗಾಯ

ಉತ್ತರ ಕನ್ನಡ: ಜಿಲ್ಲೆಯಲ್ಲಿ ಪ್ರವಾಸಕ್ಕೆ ತೆರಳಿದ್ದಂತ ಖಾಸಗಿ ಬಸ್ ಒಂದು ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಹಲವರು ಗಾಯಗೊಂಡಿರುವಂತ ಘಟನೆ ನಡೆದಿದೆ. ಗೌರಿಬಿನೂರಿನಿಂದ ಧರ್ಮಸ್ಥಳಕ್ಕೆ 53 ಜನರು ಖಾಸಗಿ ಬಸ್ ನಲ್ಲಿ ಪ್ರವಾಸಕ್ಕೆ ತೆರಳಿದ್ದರು. ಧರ್ಮಸ್ಥಳದ ಜೊತೆಗೆ ವಿವಿಧ ಪ್ರವಾಸಿ ತಾಣಗಳಿಗೂ ಭೇಟಿ ನೀಡಿದ್ದರು. ಇಂದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸುಳೆಮುರ್ಕಿಯಲ್ಲಿ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದರಿಂದಾಗಿ ತುಮಕೂರಿನ ಲೋಕೇಶ್ ಹಾಗೂ ಚಿಕ್ಕಬಳ್ಳಾಪುರದ ರುದ್ರೇಶ್ ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ … Continue reading BREAKING: ಉತ್ತರ ಕನ್ನಡದಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವು, ಹಲವರಿಗೆ ಗಾಯ