ಚಿತ್ರದುರ್ಗ: ಜಿಲ್ಲೆಯಲ್ಲಿ ಮರಕ್ಕೆ ಬೊಲೆರೋ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿಯಾದ ಪರಿಣಾಮ ಅದರಲ್ಲಿದ್ದಂತ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವಂತ ಘಟನೆ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಅಂದನೂರು ಗ್ರಾಮದ ಬಳಿಯಲ್ಲಿ ಬೊಲೆರೋ ವಾಹನ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಮೃತರನ್ನು ನಾಗತಿಹಳ್ಳಿಯ ಅರುಣ್(32), ಹನುಮಂತ(32) ಎಂಬುದಾಗಿ ಗುರುತಿಸಲಾಗಿದೆ.
ದಾವಣಗೆರೆ ತಾಲ್ಲೂಕಿನ ಅಣಜಿ ಗ್ರಾಮದಲ್ಲಿ ಅಡಿಕೆ ಲೋಡ್ ಇಳಿಸಿ ವಾಪಾಸ್ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಅಂದನೂರು ಗ್ರಾಮದ ಬಳಿಯಲ್ಲಿ ಬೊಲೆರೋ ವಾಹನ ಮರಕ್ಕೆ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.
ಬೊಲೆರೋ ವಾಹನದಲ್ಲಿದ್ದಂತ ಆರು ಕಾರ್ಮಿಕರಿಗೆ ಗಾಯವಾಗಿದ್ದರೇ, ಇಬ್ಬರ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ. ಗಾಯಾಳುಗಳನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಿಕ್ಕಜಾಜೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.








