ಚಾಮರಾಜನಗರ : ಚಾಮರಾಜನಗರದಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ವಿದ್ಯುತ್ ತಂತಿ ತಗುಲಿ ಇಬ್ಬರೂ ಕೂಲಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊತ್ತಲವಾಡಿಯ ಬಳಿ ಮೆಲ್ಲೂರಿನಲ್ಲಿ ಈ ಒಂದು ಘಟನೆ ಸಂಭವಿಸಿದೆ.
ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಬಳಿಯ ಮೇಲ್ಲೂರು ಗ್ರಾಮದ ಸ್ವಾಮಿ (52) ಕೃಷ್ಣ ಶೆಟ್ಟಿ (50) ಮೃತ ಕೂಲಿ ಕಾರ್ಮಿಕರು ಎಂದು ತಿಳಿದು ಬಂದಿದೆ. ತೋಟದಲ್ಲಿ ಕೆಲಸ ಮಾಡುತ್ತಿರುವಾಗ ಈ ಅವಘಡ ಸಂಭವಿಸಿದೆ. ಚಾಮರಾಜನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.