ಬೆಳಗಾವಿ: ಜಿಲ್ಲೆಯಲ್ಲಿ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಕನಕದಾಸ ಸರ್ಕಲ್ ನಲ್ಲಿ ಕುಡಿಯುವ ನೀರಿನ ಯೋಜನೆಗಾಗಿ ಕಾಮಗಾರಿಯನ್ನು ನಡೆಸಲಾಗುತ್ತಿತ್ತು. ಈ ಕಾಮಗಾರಿಯಲ್ಲಿ ಕಾರ್ಮಿಕರು ನಿರತರಾಗಿದ್ದರು.
ಕುಡಿಯುವ ನೀರಿನ ಕಾಮಗಾರಿಯ ವೇಳೆಯಲ್ಲಿ ದಿಢೀರ್ ಮಣ್ಣು ಕುಸಿದ ಪರಿಣಾಮ ಅದರಡಿ ಸಿಲುಕಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಮೃತ ಕಾರ್ಮಿಕರನ್ನು ಶಿವಲಿಂಗ, ಬಸವರಾಜ್ ಎಂಬುದಾಗಿ ಗುರುತಿಸಲಾಗಿದೆ. ಈ ಸಂಬಂಧ ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.