ತಮಿಳುನಾಡು: ದೇಶದಲ್ಲಿ ಹೆಚ್ ಎಂ ಪಿ ವಿ ವೈರಸ್ ಸೋಂಕಿನ ಪ್ರಕರಣಗಳ ಸಂಖ್ಯೆ ಮುಂದುವರೆದಿದೆ. ಇಂದು ತಮಿಳುನಾಡಿನಲ್ಲಿ ಮತ್ತಿಬ್ಬರು ಮಕ್ಕಳಿಗೆ ವೈರಸ್ ದೃಢಪಟ್ಟಿದೆ. ಹೀಗಾಗಿ ಭಾರತದಲ್ಲಿ ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆಯಾದಂತೆ ಆಗಿದೆ.
ತಮಿಳುನಾಡಿನ ಚೆನ್ನೈನಲ್ಲಿ ಜ್ವರ, ಶೀತ ಮತ್ತು ಕೆಮ್ಮಿನಿಂದ ಬಳಲುತ್ತಿದ್ದಂತ ಮಗುವೊಂದಕ್ಕೆ ಉಸಿರಾಟದ ತೊಂದರೆ ಕೂಡ ಕಾಣಿಸಿಕೊಂಡಿತ್ತು. ಹೀಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇಂತಹ ಮಗುವಿಗೆ ಹೆಚ್ ಎಂಪಿವಿ ವೈರಸ್ ಸೋಂಕು ತಗುಲಿರುವುದು ಪರೀಕ್ಷೆಯ ವರದಿಯಿಂದ ದೃಢಪಟ್ಟಿದೆ.
ಇನ್ನೂ ಗಿಂಡಿಯ ಖಾಸಗಿ ಮಕ್ಕಳ ಆಸ್ಪತ್ರೆಯಲ್ಲಿ ಮತ್ತೊಂದು ಮಗುವು ಇದೇ ಲಕ್ಷಣದಿಂದಾಗಿ ಚಿಕಿತ್ಸೆಗೆ ದಾಖಲಾಗಿ ಪಡೆಯುತ್ತಿತ್ತು. ಆ ಮಗುವನ್ನು ಪರೀಕ್ಷೆಗೆ ಒಳಪಡಿಸಿದಾಗ ಹೆಚ್ ಎಂ ಪಿ ವಿ ವೈರಸ್ ಸೋಂಕು ದೃಢಪಟ್ಟಿದೆ. ಈ ಮೂಲಕ ಚೆನ್ನೈನಲ್ಲಿ ಇಬ್ಬರು ಮಕ್ಕಳಿಗೆ ಸೋಂಕು ದೃಢಪಟ್ಟು, ಭಾರತದಲ್ಲಿ ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆಯಾದಂತೆ ಆಗಿದೆ.
Electricity Bill: 2 ಬಿಲಿಯನ್ ರೂಪಾಯಿ ವಿದ್ಯುತ್ ಬಿಲ್ ಕಂಡು ಆಘಾತಕ್ಕೊಳಗಾದ ವ್ಯಕ್ತಿ!