ಕೇರಳ : ನೀಟ್ ಪರೀಕ್ಷೆ ವೇಳೆ ಕಿರುಕುಳ ನೀಡಿದ ವಿವಾದ ಸಂಬಂಧ ಇಂದು ಪರೀಕ್ಷೆ ನಡೆಸವ ಉಸ್ತುವಾರಿ ಹೊತ್ತಿದ್ದ ಇಬ್ಬರು ಶಿಕ್ಷಕರನ್ನು ಬಂಧಿಸಲಾಗಿದ್ದು, ಪ್ರಕರಣದಲ್ಲಿ ಬಂಧಿತರಾಗಿರುವ ಒಟ್ಟು ಶಂಕಿತರ ಸಂಖ್ಯೆ ಏಳಕ್ಕೆ ತಪುಪಿದೆ.
ಪ್ರೊ.ಪ್ರಿಜಿ ಕುರಿಯನ್ ಮತ್ತು ಡಾ.ಶ್ಮನಾದ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಇವರು ವಿವಾದಾತ್ಮಕ ತಪಾಸಣೆಗಾಗಿ ಕಾಲೇಜಿನ ಅಧಿಕಾರಿಗಳು/ಸಿಬ್ಬಂದಿಗೆ ನಿರ್ದೇಶನ ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಜುಲೈ 17 ರಂದು ಕೇರಳದ ಕೊಲ್ಲಂನಲ್ಲಿ ನಡೆದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಗೆ (NEET) ಹಾಜರಾಗುವ ಮೊದಲು ವಿದ್ಯಾರ್ಥಿನಿಯರಿಗೆ ಒಳಉಡುಪುಗಳನ್ನು ತೆಗೆಯುವಂತೆ ಒತ್ತಾಯಿಸಿದ ಆರೋಪದ ಮೇಲೆ ಇಬ್ಬರು ಕಾಲೇಜು ಸಿಬ್ಬಂದಿ ಸೇರಿದಂತೆ ಐವರನ್ನು ಮಂಗಳವಾರ ಬಂಧಿಸಲಾಯಿತು. ಬಂಧಿತರಲ್ಲಿ ಮೂವರು ಸಂಸ್ಥೆಗೆ ಸೇರಿದವರಾಗಿದ್ದಾರೆ ಎನ್ನಲಾಗುತ್ತಿದೆ.
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಪದವಿಪೂರ್ವ (NEET UG)ಪರೀಕ್ಷೆಯನ್ನು ನಡೆಸಲು ನಿಯೋಜಿಸಲಾದ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೇರಳದ ಉನ್ನತ ಶಿಕ್ಷಣ ಸಚಿವ ಆರ್ ಬಿಂದು ಅವರು ಕೇಂದ್ರವನ್ನು ಒತ್ತಾಯಿಸಿದ್ದಾರೆ.