ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಗಣೇಶ ಮೆರವಣಿಗೆ ನೋಡಲು ತೆರಳುತ್ತಿದ್ದಂತ ಇಬ್ಬರು ದುರ್ಮರಣ ಹೊಂದಿರುವಂತ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ವಡ್ಡರಬಂಡೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಇಬ್ಬರು ದುರ್ಮರಣ ಹೊಂದಿದ್ದಾರೆ. ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ.
ಮೃತರನ್ನು ಗೆದರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಎಫ್ ಡಿಎ ಶಶಿ(42), ದಂಡಿಗಾನಹಳ್ಳಿಯ ಮೆಕ್ಯಾನಿಕ್ ಮುನಿರಾಜು(28) ಎಂಬುದಾಗಿ ಗುರುತಿಸಲಾಗಿದೆ. ಮಂಚೇನಹಳ್ಳಿಯ ರಮೇಶ್ ಸ್ಥಿತಿ ಗಂಭೀರವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಗೌರಿಬಿದನೂರು ಬೈಪಾಸ್ ಗಣೇಶ ನೋಡಲು ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ.
BIG NEWS: ಸಹಜೀವನದ ಬಳಿಕ ಮದುವೆಗೆ ನಿರಾಕರಿಸುವುದು ಅಪರಾಧವಲ್ಲ: ಹೈಕೋರ್ಟ್ ಮಹತ್ವದ ತೀರ್ಪು
ಮನುಷ್ಯ ತನ್ನ ದುರಾಸೆಯಿಂದ ಬದುಕಿನ ಮೌಲ್ಯವನ್ನು ಕಳೆದುಕೊಳ್ಳುತ್ತಿದ್ದಾನೆ: ನಿವೃತ್ತ ನ್ಯಾ.ಸಂತೋಷ್ ಹೆಗಡೆ