ಉತ್ತರಕನ್ನಡ / ಗದಗ : ರಾಜ್ಯದಲ್ಲಿ ಇಂದು ಪ್ರತ್ಯೇಕವಾಗಿ ಎರಡು ಭೀಕರ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದಾರೆ ಉತ್ತರ ಕನ್ನಡದಲ್ಲಿ ಲಾರಿ ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ಮಧ್ಯ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದರೆ, ಇನ್ನೂ ಗದಗದಲ್ಲಿ ಕಾರಿಗೆ ಗೋವಾ ಸಾರಿಗೆ ಬಸ್ ಡಿಕ್ಕಿಯಾಗಿ ಮೂವರು ಸಾವನಪ್ಪಿದ್ದಾರೆ.
ಲಾರಿ-‘KSRTC’ ಬಸ್ ಮಧ್ಯ ಭೀಕರ ಅಪಘಾತ ಸ್ಥಳದಲ್ಲೇ ಇಬ್ಬರು ಸಾವು!
ಉತ್ತರ ಕನ್ನಡದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಲಾರಿ ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲಿ ಇಬ್ಬರು ಸಾವನಪ್ಪಿದ್ದಾರೆ. ಕಂಚಿನ ಬಾಗಿಲು ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕಂಚಿನ ಬಾಗಿಲು ಎಂಬಲ್ಲಿ ಅಪಘಾತ ಸಂಭವಿಸಿದೆ.
ಉತ್ತರಕನ್ನಡ ಜಿಲ್ಲೆಯ ಅಂಕೋಲಾ ದಿಂದ ಲಾರಿ ಯಲ್ಲಾಪುರ ಕಡೆಗೆ ತೆರಳುತ್ತಿತ್ತು. ಈ ವೇಳೆ KSRTC ಬಸ್ ಲಾರಿ ಮಧ್ಯ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಲಾರಿ ಚಾಲಕ ಮತ್ತು ಬಸ್ ನಲ್ಲಿ ಇದ್ದಂತ ಓರ್ವ ಪ್ರಯಾಣಿಕ ಸಾವನಪ್ಪಿದ್ದಾರೆ. ಗಾಯಾಳುಗಳನ್ನು ಅಂಕೋಲಾ ತಾಲೂಕು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರಿಗೆ ಗೋವಾ ಸಾರಿಗೆ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರ ದುರ್ಮರಣ!
ಇನ್ನು ಗದಗದಲ್ಲಿ ಸಹ ಭೀಕರವಾದ ಅಪಘಾತ ಸಂಭವಿಸಿದ್ದು ಕಾರು ಒಂದಕ್ಕೆ ಗೋವಾ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಹರ್ಲಾಪುರ ಗ್ರಾಮದ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಗದಗ ತಾಲೂಕಿನ ಹರ್ಲಾಪುರ ಗ್ರಾಮದ ಬಳಿ ಈ ಒಂದು ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ರವಿ ನೆಲ್ಲೂರು ಅರ್ಜುನ್ ನೆಲ್ಲೂರು ಸೇರಿದಂತೆ ಸ್ಥಳದಲ್ಲೇ ಮೂವರು ಸಾವನಪ್ಪಿದ್ದಾರೆ ಮೃತಪಟ್ಟವರು ಹಾವೇರಿ ಜಿಲ್ಲೆಯ ಹುನಗುಂದ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ. ಅಪಘಾತದ ಕುರಿತು ಗದಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.