ಬೆಂಗಳೂರು: ನಗರದಲ್ಲಿ ಎರಡು ಅಂತಸ್ತಿನ ಕಟ್ಟಡವೊಂದು ಕುಸಿತಗೊಂಡಿದೆ. ಈ ಪರಿಣಾಮ ಮನೆಯ ಅವಶೇಷಗಳಡಿ ಹಲವರು ಸಿಲುಕಿರುವಂತ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಬೆಂಗಳೂರಿನ ಜೀವನ್ ಭೀಮಾನಗರದ ತಿಪ್ಪಸಂದ್ರದಲ್ಲಿ ಪಕ್ಕದ ಮನೆಯ ಕಟ್ಟಡದ ಪಾಯ ತೆಗೆಯುವಾಗ, ಎರಡು ಅಂತಸ್ತಿನ ಕಟ್ಟಡವೊಂದು ಕುಸಿತಗೊಂಡಿದೆ. ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಆಗಮಿಸಿದ್ದಾರೆ.
ಕುಸಿತಗೊಂಡ ಎರಡು ಅಂತಸ್ತಿನ ಕಟ್ಟಡದಲ್ಲಿ ಸಿಲುಕಿದ್ದವರನ್ನು ಹೊರ ಕಳಿಸಿದ್ದಾರೆ. ಇನ್ನೂ ಅವಶೇಷಗಳ ಅಡಿಯಲ್ಲಿ ಯಾರಾದರೂ ಸಿಲುಕಿದ್ದಾರಾ ಅಂತ ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಅವರ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ರೈಲ್ವೆ ಪ್ರಯಾಣಿಕರಿಗೆ ಮಹತ್ವದ ಮಾಹಿತಿ: ಈ ರೈಲು ಸೇವೆಯಲ್ಲಿ ಬದಲಾವಣೆ, ಮರು ವೇಳಾಪಟ್ಟಿ
BREAKING NEWS : ‘ಅನ್ನಭಾಗ್ಯ’ ಫಲಾನುಭವಿಗಳಿಗೆ ಹಣದ ಬದಲು ಅಕ್ಕಿ ಕೊಡಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ