ರಾಯಚೂರು: ಜಿಲ್ಲೆಯ ಶಾಲಾ ಬಸ್ ಹಾಗೂ ಸರ್ಕಾರಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಅಲ್ಲದೇ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವಂತ ಘಟನೆ ನಡೆದಿದೆ.
ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕಪಗಲ್ ಬಳಿಯಲ್ಲಿ ಶಾಲಾ ಹಾಗೂ ಸರ್ಕಾರಿ ಬಸ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ವಿದ್ಯಾರ್ಥಿಗಳಾದಂತ ಸಮರ್ಥ(7) ಹಾಗೂ ಶ್ರೀಕಾಂತ್(12) ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಅಪಘಾತದಲ್ಲಿ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಅವರನ್ನು ರಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಶಾಲಾ ಬಸ್ಸಿನಲ್ಲಿದ್ದಂತ 17ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದ್ದರೇ, ನಾಲ್ವರ ಕಾಲು ತುಂಡಾಗಿದೆ. 23 ಜನರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸರ್ಕಾರಿ ಬಸ್ಸಿನಲ್ಲಿದ್ದಂತ 17 ಜನರಿಗೆ ಗಾಯವಾಗಿದೆ.
ಕೆ ಎಸ್ ಆರ್ ಟಿಸಿಯಿಂದ ಮೃತ ಇಬ್ಬರು ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ, ಗಾಯಗೊಂಡಿರುವಂತವರಿಗೆ 3 ಲಕ್ಷ ಪರಿಹಾರ ನೀಡುವುದಾಗಿ ತಿಳಿಸಿದೆ. ಈ ಘಟನೆ ಶಾಲಾ ಬಸ್ ಚಾಲಕನ ನಿರ್ಲಕ್ಷ್ಯದಿಂದ ಸಂಭವಿಸಿದ್ದು ಎನ್ನಲಾಗುತ್ತಿದೆ.
ಕೇರಳದ ‘ಹೇಮಾ’ ಸಮಿತಿ ಮಾದರಿ ಸಮಿತಿ ರಚಿಸಿ : ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಮನವಿ ಮಾಡಿದ ‘ಫೈರ್’
ಬಾಂಗ್ಲಾದೇಶ ಹಸ್ತಾಂತರಕ್ಕೆ ಮನವಿ ಮಾಡುವವರೆಗೂ ‘ಶೇಖ್ ಹಸೀನಾ’ ಭಾರತದಲ್ಲಿ ಮೌನವಾಗಿರಬೇಕು: ಮುಹಮ್ಮದ್ ಯೂನುಸ್