ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಇಬ್ಬರು ಯುವಕರು ಸಾವನ್ನಪ್ಪಿರುವಂತ ಘಟನೆ ಭಟ್ಕಳದಲ್ಲಿ ನಡೆದಿದೆ.
ಕಾರವಾರದ ಭಟ್ಕಳದ ವೆಂಕಟಾಪುರದ ಬಳಿಯಲ್ಲಿ ವಿದ್ಯುತ್ ಕಂಬಕ್ಕೆ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಭಟ್ಕಳದ ಆಜಾದ್ ನಗರದ ನಿವಾಸಿ ಮೊಹಮ್ಮದ್ ಅಶ್ರಫ್ ರುಕ್ನದ್ದೀನ್ ಶಿಪಾಯಿ ಅವರ ಪುತ್ರ ಬಿಲಾಲ್(15) ಹಾಗೂ ಆಯಾನ್ (20) ಎಂಬುವರು ಮೃತಪಟ್ಟಿದ್ದಾರೆ.
ಬಿಲಾಲ್ ಸ್ಥಳದಲ್ಲೇ ಸಾವನ್ನಪ್ಪಿದರೇ, ತೀವ್ರವಾಗಿ ಗಾಯಗೊಂಡಿದ್ದಂತ ಆಯಾನ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾನೆ. ಮೃತರು ಶಿರಾಲಿಯಿಂದ ಭಟ್ಕಳಕ್ಕೆ ಕಾರಿನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಈ ಸಂಬಂಧ ಶಹರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮನ್ನು ಪ್ರಶ್ನಿಸಲು ಬಿಜೆಪಿಗೆ ಯಾವುದೇ ನೈತಿಕತೆ ಇಲ್ಲ: ಸಿಎಂ ಸಿದ್ದರಾಮಯ್ಯ








