ಕಲಬುರ್ಗಿ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ರಾಜ್ಯಪಾಲರು ಪ್ರಾಜಿಕ್ಯೂಷನ್ ಗೆ ಅನುಮತಿ ನೀಡಿರುವ ವಿಚಾರವಾಗಿ ಇದೀಗ ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ.ಅದರಂತೆ ಕಲಬುರ್ಗಿಯಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲಾಯಿತು.
ಕಲಬುರ್ಗಿಯ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಕುರುಬ ಸಂಘ ಹಾಗೂ ಹಿಂದುಳಿದ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಯಿತು. ಟೈರ್ ಗೆ ಬೆಂಕಿ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ರಾಜ್ಯಪಾಲರ ನಡೆಯನ್ನು ಖಂಡಿಸಿ ಇದೀಗ ಕುರುಬ, ಹಿಂದುಳಿದ ಸಂಘಟನೆಗಳಿಂದ ರಸ್ತೆ ತಡೆ ಹಿಡಿದು ಮಾನವ ಸರಪಳಿ ಮೂಲಕ ಪ್ರತಿಭಟನೆ ಮಾಡಿತ್ತಿದ್ದಾರೆ.