ಮಂಡ್ಯ : ತೀವ್ರ ಕುತೂಹಲ ಕೆರಳಿಸಿದ್ದ ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ, ಉಪಾಧ್ಯಕ್ಷರ ( ಮನ್ ಮುಲ್ ) ಚುನಾವಣೆ ಅಂತಿಮವಾಗಿ ಕೈ ವಶವಾಗಿದ್ದು, ಅಧ್ಯಕ್ಷರಾಗಿ ಹ್ಯಾಟ್ರಿಕ್ ಗೆಲುವಿನ ಸರದಾರ ಯು.ಸಿ. ಶಿವಪ್ಪ ಹಾಗೂ ಉಪಾಧ್ಯಕ್ಷರಾಗಿ ಕೃಷ್ಣೇಗೌಡ ಅವರುಗಳು ಮಂಗಳವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಆದರೆ, ಉಪಾಧ್ಯಕ್ಷ ಕೃಷ್ಣೇಗೌಡ ಆಯ್ಕೆ ಬಗ್ಗೆ ಹೈಕೋರ್ಟ್ ನಲ್ಲಿ ತಡೆಯಾಜ್ಞೆ ಇದ್ದು, ವಿಚಾರಣೆ ಬಾಕಿ ಇರೋದ್ರಿಂದ ಅಧಿಕೃತವಾಗಿ ಘೋಷಣೆ ಮಾಡುವಂತಿಲ್ಲ. ಹೈಕೋರ್ಟ್ ನಲ್ಲಿ ಜೂ.4 ರಂದು ಪ್ರಕರಣದ ಅಂತಿಮ ವಿಚಾರಣೆ ನಡೆಯಲ್ಲಿದ್ದು, ಅಲ್ಲಿಯವರೆಗೂ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ನಿರ್ದೇಶಕರಾಗಿ ಮಾತ್ರ ಮುಂದುವರೆಯುತ್ತಾರೆ ಎಂದು ಚುನಾವಣಾಧಿಕಾರಿ ಬಿ.ಸಿ.ಶಿವನಂದಮೂರ್ತಿ ಹೇಳಿದರು.
ಮನ್ ಮುಲ್ ನಿರ್ದೇಶಕ ಚುನಾವಣೆಯಲ್ಲಿ ಮಳವಳ್ಳಿಯಿಂದ ಆಯ್ಕೆಯಾಗಿರುವ ಕೃಷ್ಣೇಗೌಡರ ಆಯ್ಕೆ ಕುರಿತು ಹೈಕೋರ್ಟ್ ನಲ್ಲಿ ಪ್ರಕರಣ ಬಾಕಿ ಇರುವ ಕಾರಣ ಚುನಾವಣೆ ಪ್ರಕ್ರಿಯೆಯನ್ನು ಅಧೀಕೃತ ಫಲಿತಾಂಶಕ್ಕೆ ತಡೆಯಾಜ್ಞೆ ಬಿದ್ದಿದೆ.ಯ
ಅಧ್ಯಕ್ಷ ಸ್ಥಾನದ ಗದ್ದುಗೆ ಏರಲು ಎನ್.ಅಪ್ಪಾಜಿಗೌಡ, ಬಿ.ಬೋರೇಗೌಡ, ಹರೀಶ್ ಬಾಬು ಅವರುಗಳು ಶಿವಪ್ಪಗೆ ಪ್ರಬಲ ಸ್ಪರ್ಧಿಯಾಗಿದ್ದರು. ಆದರೆ, ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಹಾಗೂ ಶಾಸಕ ಗಣಿಗ ರವಿಕುಮಾರ್ ಹಾಗೂ ಜಿಲ್ಲೆಯ ಶಾಸಕರುಗಳು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿಗಳ ಸಭೆ ನಡೆಸಿ ಅಪಸ್ವರಕ್ಕೆ ಅವಕಾಶ ಕೊಡದ
ಹಿನ್ನೆಲೆಯಲ್ಲಿ
ಮೊದಲ ಅವಧಿಗೆ ಉಮ್ಮಡಹಳ್ಳಿ ಶಿವಪ್ಪ ಹಾಗೂ ಉಪಾಧ್ಯಕ್ಷರಾಗಿ ಕೃಷ್ಣೇಗೌಡ ಅವರುಗಳನ್ನು ಅಂತಿಮಗೊಳಿಸಿದ್ದರು.
ಬಳಿಕ ಎಲ್ಲಾ ನಿರ್ದೇಶಕರ ಒಮ್ಮತದ ಅಭ್ಯರ್ಥಿಗಳಾಗಿ ಯು.ಸಿ.ಶಿವಪ್ಪ ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಯು.ಸಿ.ಶಿವಪ್ಪ ಆಯ್ಕೆ ಅಂತಿಮವಾಗಿದೆ.
ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಉಮ್ಮಡಹಳ್ಳಿ ಶಿವಪ್ಪ ಮನ್ ಮುಲ್ ನ ಎಲ್ಲಾ ನಿರ್ದೇಶಕರು ಹಾಗೂ ಅಧಿಕಾರಿಗಳನ್ನು ಒಗ್ಗೂಡಿಸಿಕೊಂಡು ಉತ್ತಮವಾಗಿ ಹಾಗೂ ರೈತ ಸ್ನೇಹಿಯಾಗಿ ಕೆಲಸ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಅಗತ್ಯ ಇರುವ ಬದಲಾವಣೆ ತರಲು ಶ್ರಮಿಸುತ್ತೇನೆ. ಈಗಾಗಲೇ ಕೇವಲ ಆರು ತಿಂಗಳಲ್ಲಿ ದೆಹಲಿಯಲ್ಲಿ ಮನ್ ಮುಲ್ ನಿಂದ 50 ಸಾವಿರ ಲೀಟರ್ ಹಾಲು ಮಾರಾಟವಾಗುವ ಮೂಲಕ ದಾಖಲೆ ಬರೆದಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಮತ್ತಷ್ಟು ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದರು.
ಇದೇ ವೇಳೆ ದೆಹಲಿಯಲ್ಲಿ ಕೇವಲ 6 ತಿಂಗಳಲ್ಲಿ 50 ಸಾವಿರಕ್ಕೂ ಹೆಚ್ಚು ಹಾಲು ಮಾರಾಟವಾಗಿರುವುದಕ್ಕೆ ಮನ್ ಮುಲ್ ಮಾಜಿ ಅಧ್ಯಕ್ಷ ಬಿ.ಬೋರೇಗೌಡ ಅವರು ಕೇಕ್ ಕತ್ತರಿಸಿ ಆಡಳಿತ ಮಂಡಳಿ ಪದಾಧಿಕಾರಿಗಳಿಗೆ ಮತ್ತು ಅಧಿಕಾರಿಗಳಿಗೆ ಕೇಕ್ ತಿನ್ನಿಸುವ ಮೂಲಕ ಸಂಭ್ರಮಾಚರಣೆ ನಡೆಸಿದರು.
ಇದೇ ವೇಳೆ ಮಂಡ್ಯ ಶಾಸಕ ಗಣಿಗ ರವಿಕುಮಾರ್, ಮದ್ದೂರು ಶಾಸಕ ಕೆ.ಎಂ.ಉದಯ್ ಹಾಗೂ ಮನ್ ಮುಲ್ ನಿರ್ದೇಶಕರು, ಅಧಿಕಾರಿ ವೃಂದ, ಅಪಾರ ಅಭಿಮಾನಿಗಳು ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಅಭಿನಂದಿಸಿ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.
ವರದಿ : ಗಿರೀಶ್ ರಾಜ್, ಮಂಡ್ಯ
2024-25ನೇ ಸಾಲಿನ ‘ಶಿಕ್ಷಕರ ಸಾಮಾನ್ಯ ವರ್ಗಾವಣೆ’ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ
GOOD NEWS: ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ: ಆನ್‌ಲೈನ್ ಮೂಲಕ ಸ್ವಯಂಘೋಷಣೆಗೆ ಅವಕಾಶ