ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರನ್ನಾಗಿ ಯು.ನಿಸಾರ್ ಅಹ್ಮದ್ ಅವರನ್ನು ನಾಮ ನಿರ್ದೇಶನ ಮಾಡಿ ಆದೇಶಿಸಿದೆ.
ಈ ಸಂಬಂಧ ಇಂದು ಅಲ್ಪಸಂಖ್ಯಾತರ ಕಲ್ಯಾಣ ಹಜ್ ಮತ್ತು ವಕ್ಫ್ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯಾದಂತ ನಾಗರಾಜ ಅವರು ಅಧಿಸೂಚನೆ ಹೊರಡಿಸಿದ್ದಾರೆ.
ಕರ್ನಾಟಕ ರಾಜ್ಯ ಅಲ್ಪ ಸಂಖ್ಯಾತರ ಆಯೋಗದ ಕಾಯ್ದೆ 1994ರ ಸೆಕ್ಷನ್ 3(1) ಮತ್ತು 4(1) ರಡಿಯಲ್ಲಿ ಸರ್ಕಾರಕ್ಕೆ ಪ್ರದತ್ತವಾದ ಅಧಿಕಾರಿವನ್ನು ಚಲಾಯಿಸಿ, ಯು ನಿಸಾರ್ ಅಹ್ಮದ್, ನಿವೃತ್ತ ಐಜಿಪಿ, ಇ-83, 6ಎ ಕ್ರಾಸ್, ಮಾನ್ಯತಾ ರೆಸಿಡೆನ್ಸಿ ಟೆಕ್ ಪಾರ್ಕ್, ರಾಚೇನಹಳ್ಳಿ, ಬೆಂಗಳೂರು ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರನ್ನಾಗಿ ನಾಮ ನಿರ್ದೇಶನಗೊಳಿಸಲಾಗಿದೆ ಅಂತ ತಿಳಿಸಿದ್ದಾರೆ.
BREAKING: ಕೊನೆಗೂ ಭವಾನಿ ರೇವಣ್ಣ ಪ್ರತ್ಯಕ್ಷ. ಎಸ್‌ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರು…!