ಮೈಸೂರು: ನಗರದಲ್ಲಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು 8 ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ದುಷ್ ಕೃತ್ಯ ಮೆರೆದಿದ್ದರು. ಈ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಂತ ಸಿಸಿಬಿ ಪೊಲೀಸರು, ಬರೋಬ್ಬರಿ 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಮೈಸೂರಿನ ಶಾಂತಿನಗರ ಸುಹೇಲ್ ಆಲಿಯಾಸ್ ಸೈಯದ್ ಸುಹೇಲ್, ರಹೀಲ್ ಪಾಷಾ, ಸತ್ಯನಗರದ ಏಜಾಜ್, ಮೈಸೂರಿನ ಗೌಸಿಯಾ ನಗರದ ನಿವಾಸಿ ಸಿಯದ್ ಸಾದಿಕ್, ರಾಜೀವ್ ನಗರದ ಸಾದಿಕ್ ಪಾಷಾ ಆಲಿಯಾಸ್ ಖಾಲಿ, ಅರ್ಬಾಜ್ ಷರೀಫ್, ಶೋಹೆಬ್ ಪಾಷಾ ಸೇರಿ 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಇನ್ನೂ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲಿನ ಕಲ್ಲು ತೂರಾಟ ಪ್ರಕರಣ ಸಂಬಂಧ ಇನ್ನೂ ಹಲವರನ್ನು ಪೊಲೀಸರು ಬಂಧಿಸುವ ಸಾಧ್ಯತೆ ಇದೆ.
BIG NEWS: ಪ್ರಯಾಗ್ ರಾಜ್ ಕುಂಭಮೇಳದಲ್ಲಿ ಪುಣ್ಯ ಸ್ನಾನದ ವೇಳೆಯೇ ಹೃದಯಾಘಾತದಿಂದ ತುಮಕೂರಿನ ವ್ಯಕ್ತಿ ಸಾವು
BREAKING : ‘ಮುಡಾ’ ಅಕ್ರಮ ಹಗರಣ : ಲೋಕಾಯುಕ್ತ ಎಸ್.ಪಿ ಇಂದ ಐಜಿಪಿಗೆ ಅಂತಿಮ ತನಿಖಾ ವರದಿ ಸಲ್ಲಿಕೆ