ಮೈಸೂರು: ಕಳೆದ ಕೆಲವು ದಿನಗಳ ಹಿಂದೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲುತೂರಾಟ ನಡೆಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಚೋದನಾಕಾರಿ ಭಾಷಣ ಮಾಡಿ ಪರಾರಿಯಾಗಿದ್ದ ಮುಸ್ಲಿಂ ಮುಖಂಡ ಮುಸ್ತಾಕ್ ನನ್ನು ಕೊನೆಗೂ ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಬಂಧಿತ ಆರೋಪಿಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.
ಹೌದು ಮೈಸೂರಿನಲ್ಲಿ ಕಳೆದ 11 ದಿನಗಳ ಹಿಂದೆ ಉದಯಗಿರಿ ಠಾಣೆಯ ಮೇಲೆ ಉದ್ರಿಕ್ತರ ಗುಂಪೊಂದು ಕಲ್ಲುತೂರಾಟ ನಡೆಸಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದರು. ಗಲಾಟೆ ನಡೆದು 11 ದಿನಗಳ ಬಳಿಕ ಆರೋಪಿ ಮೌಲ್ವಿ ಮುಸ್ತಾಕ್ ನನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದರು. ಮುಂಜಾಗ್ರತ ಕ್ರಮವಾಗಿ ಉದಯಗಿರಿ ಠಾಣೆ ಬಳಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಆರೋಪಿ ಮುಸ್ತಾಕ್ ನನ್ನು ಬಂಧಿಸಿ ಇದೀಗ ಪೊಲೀಸರು ವಿಚಾರಣೆ ನಡೆಸಿದ್ದರು.
ಆ ಬಳಿಕ ಮೈಸೂರಿನ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತ ನ್ಯಾಯಾಧೀಶರು, ಆರೋಪಿ ಮೌಲ್ವಿ ಮುಸ್ತಾಕ್ ನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.
ರಾಜ್ಯ ಸರ್ಕಾರದಿಂದ ‘PUC, SSLC ಪರೀಕ್ಷೆ’ಯಲ್ಲಿ ಅಕ್ರಮ ತಡೆಗೆ ಮಹತ್ವದ ಕ್ರಮ
BREAKING: ರಾಜ್ಯ ಸರ್ಕಾರದಿಂದ ಅರಣ್ಯಪಡೆಗೆ ಪ್ರಥಮ ಮಹಿಳಾ ಮುಖ್ಯಸ್ಥೆಯಾಗಿ ‘ಮೀನಾಕ್ಷಿ ನೇಗಿ’ ನೇಮಕ