Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇರುವಷ್ಟು ದಿನ ಕ್ಷೇತ್ರದ ಅಭಿವೃದ್ದಿಯೇ ನನ್ನ ಧ್ಯೇಯ: ಮದ್ದೂರು ಶಾಸಕ ಕೆ.ಎಂ.ಉದಯ್

04/04/2026 5:03 PM

SC, ST ಜನಾಂಗದ ಸಮಸ್ಯೆಗಳಿಗೆ ತಾಲೂಕು ಹಂತದಲ್ಲೇ ಪರಿಹಾರಕ್ಕೆ ಕ್ರಮ: ಆಯೋಗದ ಅಧ್ಯಕ್ಷ ಡಾ.ಎಲ್.ಮೂರ್ತಿ

04/04/2026 5:00 PM

ಉಪ ಚುನಾವಣೆಯಲ್ಲಿ ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

04/04/2026 4:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದಯಗಿರಿ ಗಲಭೆಯ ಆರೋಪಿಗಳನ್ನು ಕಠಿಣವಾಗಿ ಶಿಕ್ಷಿಸಬೇಕು: HDK ಆಗ್ರಹ
KARNATAKA

ಉದಯಗಿರಿ ಗಲಭೆಯ ಆರೋಪಿಗಳನ್ನು ಕಠಿಣವಾಗಿ ಶಿಕ್ಷಿಸಬೇಕು: HDK ಆಗ್ರಹ

By kannadanewsnow0924/02/2025 9:49 PM

ಮೈಸೂರು: ಮೈಸೂರಿನ ಉದಯಗಿರಿ ಗಲಭೆಯ ಗಲಭೆಕೋರರು ಯಾರೇ ಆಗಿದ್ದರೂ ಅವರನ್ನು ನಿರ್ದಯವಾಗಿ ಶಿಕ್ಷೆಗೆ ಗುರಿ ಮಾಡಬೇಕು. ಪೊಲೀಸ್ ವಾಹನಗಳ ಮೇಲೆ ಕಲ್ಲು ಹೊಡೆಯುತ್ತಾರೆ ಎಂದರೆ ನಮ್ಮ ರಾಜ್ಯದ ಶಾಂತಿ ಸುವ್ಯವಸ್ಥೆ ಎಲ್ಲಿಗೆ ಬಂದಿದೆ ಎಂಬುದನ್ನು ಗಮನಿಸಬಹುದು ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಕಿಡಿಕಾರಿದರು.

ಮೈಸೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು, ಕರ್ನಾಟಕ ಕುವೆಂಪು ಅವರ ಸಂದೇಶದಂತೆ ಸರ್ವ ಜನಾಂಗದ ಶಾಂತಿಯ ತೋಟವಾಗಿಯೇ ಉಳಿಯಬೇಕು. ಬಿಜೆಪಿ ಸ್ನೇಹಿತರಿಗೆ ನಾನು ಮನವಿ ಮಾಡಿಕೊಳ್ತೀನಿ. ನಮ್ಮ ಸಮಾಜಕ್ಕೆ ರಕ್ಷಣೆ ನೀಡಬೇಕೆಂದು‌ ನೀವು ಹೋಗುತ್ತೀರಿ. ನಿಮ್ಮ ಒಳ್ಳೆಯ ಉದ್ದೇಶವನ್ನು ದುರುಪಯೋಗ ಮಾಡಿಕೊಂಡು ಅವರು‌ ಭದ್ರವಾಗುತ್ತಾ ಹೋಗುತ್ತಿದ್ದಾರೆ. ಎರಡೂ ಪಕ್ಷದ ನಾಯಕರಿಗೆ ನಾನು ಮನವಿ ಮಾಡಿಕೊಳ್ಳುವೆ. ರಾಜ್ಯದಲ್ಲಿ ಹಲವು ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನ ಮಾಡಿ. ಶಾಂತಿ, ನೆಮ್ಮದಿ ಹಾಳು ಮಾಡುವ ಇಂಥ ಗಲಭೆಕೋರ ಶಕ್ತಿಗಳನ್ನು ಮಟ್ಟ ಹಾಕಿ ಎಂದು ಸರ್ಕಾರವನ್ನು ಒತ್ತಾಯ ಮಾಡಿದರು.

ಪೊಲೀಸ್ ವಾಹನದ ಮೇಲೆ ಕಲ್ಲು ತೂರಿದವರನ್ನ ಬಲಿ ಹಾಕಬೇಕು. ಎಷ್ಟು ದಿನ ಅಂತ ಇಂತಹವರನ್ನು ಸಹಿಸಿಕೊಳ್ತೀರಿ. ಯಾರನ್ನೋ ಓಲೈಸಲು ಸರ್ಕಾರ ಇರುವುದಲ್ಲ. ಎಲ್ಲರ ಸರ್ಕಾರ ಎಂಬುದನ್ನು ಕಾಂಗ್ರೆಸ್ ಮರೆಯಬಾರದು. ಕಾನೂನು‌ ಬಾಹಿರ ಚಟುವಟಿಕೆ ನಡೆಸುವವನು‌ ಯಾರೇ ಇರಲಿ ಕಾನೂನು ಕ್ರಮ ತೆಗೆದುಕೊಳ್ಳಬೇಕಾದದ್ದು ರಾಜ್ಯ ಸರ್ಕಾರದ ಕರ್ತವ್ಯ. ಮೂಟೆಗಟ್ಟಲೆ ಕಲ್ಲು ತಂದು ಹೊಡೆದವರನ್ನು ರಕ್ಷಣೆ ಮಾಡಬೇಕಾ? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರು ಕೊಡಗು ಕ್ಷೇತ್ರದ ಲೋಕಸಭೆ ಸದಸ್ಯರಾದ ಯದುವೀರ ಚಾಮರಾಜ ಒಡೆಯರ್, ಮಾಜಿ ಸಚಿವರಾದ ಸಾ.ರಾ. ಮಹೇಶ್, ಸಿ.ಎಸ್. ಪುಟ್ಟರಾಜು, ವಿಧಾನ ಪರಿಷತ್ ಸದಸ್ಯರಾದ ಸಿ.ಎನ್. ಮಂಜೇಗೌಡ, ಮಾಜಿ ಶಾಸಕ ಅಶ್ವಿನ್ ಕುಮಾರ್, ಮಾಜಿ ಮೇಯರ್ ರವಿ ಕುಮಾರ್, ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಮಹೇಶ್ ಸೇರಿದಂತೆ ಅನೇಕ ಗಣ್ಯರು ಮಾಧ್ಯಮಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಭಾರತದಲ್ಲಿ 2024ರಲ್ಲಿ 84 ಬಾರಿ ಇಂಟರ್ನೆಟ್ ಸ್ಥಗಿತ: ವಿಶ್ವದಲ್ಲೇ 2ನೇ ಸ್ಥಾನ | Internet shutdown

ಸಿಎಂ ಅನುಕೂಲಕ್ಕೆ ತಕ್ಕಂತೆ ಲೋಕಾಯುಕ್ತ ವರದಿ: ಹೆಚ್.ಡಿ. ಕುಮಾರಸ್ವಾಮಿ ಟೀಕೆ

Share. Facebook Twitter LinkedIn WhatsApp Email

Related Posts

ಇರುವಷ್ಟು ದಿನ ಕ್ಷೇತ್ರದ ಅಭಿವೃದ್ದಿಯೇ ನನ್ನ ಧ್ಯೇಯ: ಮದ್ದೂರು ಶಾಸಕ ಕೆ.ಎಂ.ಉದಯ್

04/04/2026 5:03 PM3 Mins Read

SC, ST ಜನಾಂಗದ ಸಮಸ್ಯೆಗಳಿಗೆ ತಾಲೂಕು ಹಂತದಲ್ಲೇ ಪರಿಹಾರಕ್ಕೆ ಕ್ರಮ: ಆಯೋಗದ ಅಧ್ಯಕ್ಷ ಡಾ.ಎಲ್.ಮೂರ್ತಿ

04/04/2026 5:00 PM2 Mins Read

ಉಪ ಚುನಾವಣೆಯಲ್ಲಿ ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

04/04/2026 4:57 PM3 Mins Read
Recent News

ಇರುವಷ್ಟು ದಿನ ಕ್ಷೇತ್ರದ ಅಭಿವೃದ್ದಿಯೇ ನನ್ನ ಧ್ಯೇಯ: ಮದ್ದೂರು ಶಾಸಕ ಕೆ.ಎಂ.ಉದಯ್

04/04/2026 5:03 PM

SC, ST ಜನಾಂಗದ ಸಮಸ್ಯೆಗಳಿಗೆ ತಾಲೂಕು ಹಂತದಲ್ಲೇ ಪರಿಹಾರಕ್ಕೆ ಕ್ರಮ: ಆಯೋಗದ ಅಧ್ಯಕ್ಷ ಡಾ.ಎಲ್.ಮೂರ್ತಿ

04/04/2026 5:00 PM

ಉಪ ಚುನಾವಣೆಯಲ್ಲಿ ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

04/04/2026 4:57 PM

SSLC ಹಿಂದಿ ಗ್ರೇಡ್ ವಿವಾದ: ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಕರವೇ; ಸೋಮವಾರ ರಾಜಭವನಕ್ಕೆ ಮುತ್ತಿಗೆಗೆ ಕರೆ

04/04/2026 4:50 PM
State News
KARNATAKA

ಇರುವಷ್ಟು ದಿನ ಕ್ಷೇತ್ರದ ಅಭಿವೃದ್ದಿಯೇ ನನ್ನ ಧ್ಯೇಯ: ಮದ್ದೂರು ಶಾಸಕ ಕೆ.ಎಂ.ಉದಯ್

By kannadanewsnow0904/04/2026 5:03 PM KARNATAKA 3 Mins Read

ಮಂಡ್ಯ : ಗ್ರಾಮಗಳ ಅಭಿವೃದ್ಧಿಗೋಸ್ಕರ 4 ಗ್ರಾಮ ಪಂಚಾಯಿತಿಗಳನ್ನು ಮದ್ದೂರು ನಗರಸಭೆಗೆ ಸೇರಿಸಲಾಗಿದೆಯೇ ಹೊರತು ಇದರಲ್ಲಿ ನನ್ನ ವೈಯಕ್ತಿಕ ಹಿತಾಸಕ್ತಿ…

SC, ST ಜನಾಂಗದ ಸಮಸ್ಯೆಗಳಿಗೆ ತಾಲೂಕು ಹಂತದಲ್ಲೇ ಪರಿಹಾರಕ್ಕೆ ಕ್ರಮ: ಆಯೋಗದ ಅಧ್ಯಕ್ಷ ಡಾ.ಎಲ್.ಮೂರ್ತಿ

04/04/2026 5:00 PM

ಉಪ ಚುನಾವಣೆಯಲ್ಲಿ ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

04/04/2026 4:57 PM

SSLC ಹಿಂದಿ ಗ್ರೇಡ್ ವಿವಾದ: ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಕರವೇ; ಸೋಮವಾರ ರಾಜಭವನಕ್ಕೆ ಮುತ್ತಿಗೆಗೆ ಕರೆ

04/04/2026 4:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.