ಮಂಡ್ಯ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಈ ಹಿಂದೆಯೇ ಬಿಜೆಪಿಯಲ್ಲಿ ಸಾಕಷ್ಟು ಹುದ್ದೆಗಳ ಆಮೀಷಗಳು ಬಂದಿದ್ದವು. ಆದರೆ, ಆಗಲೇ ಬಿಜೆಪಿ ಸೇರದವರು ಈಗ ಸೇರ್ತಾರಾ ಎಂದು ಶಾಸಕ ಕೆ.ಎಂ.ಉದಯ್ ಅಚ್ಚರಿ ಹೇಳಿಕೆ ನೀಡಿದ್ದಾರೆ.
ಮದ್ದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೋರಾಪುರ, ಕುದುರಗುಂಡಿ, ಅಜ್ಜಹಳ್ಳಿ, ಮಠದದೊಡ್ಡಿ, ಬೊಮ್ಮನದೊಡ್ಡಿ, ಕಳ್ಳಿಮೆಳೆದೊಡ್ಡಿ ಗ್ರಾಮಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಬಿಜೆಪಿ ನಾಯಕರು ಪಕ್ಷ ಸೇರ್ಪಡೆಗೆ ಹಲವು ಬಾರಿ ಚರ್ಚೆ ನಡೆಸಿ ಮಹತ್ವದ ಹುದ್ದೆಗಳ ಆಮೀಷ ನೀಡಿದ್ದರು. ಅವರು ಸಹ ಬಿಜೆಪಿ ಸೇರಿ ಉನ್ನತ ಹುದ್ದೆಗಳನ್ನು ಅಲಂಕರಿಸಬಹುದಿತ್ತು. ಆದರೆ, ಅವರು ಅಂತಹ ನಿರ್ಧಾರ ತೆಗೆದುಕೊಳ್ಳಲಿಲ್ಲ. ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಪಕ್ಷದ ಕಟ್ಟಾಳಾಗಿದ್ದಾರೆ. ಪಕ್ಷ ನಿಷ್ಠೆ, ಪ್ರಾಮಾಣಿಕತೆ ಮತ್ತು ಪ್ರಬುದ್ದತೆಯಿಂದ ಕಾಂಗ್ರೆಸ್ ಪಕ್ಷವನ್ನು ಮುನ್ನೆಡೆಸಿಕೊಂಡು ಹೋಗುತ್ತಿದ್ದಾರೆ.
ರಾಜ್ಯಾದ್ಯಂತ ಹಗಲಿರುಳು ಪ್ರವಾಸ ಮತ್ತು ಸಂಘಟನೆ ಮಾಡಿ ರಾಜ್ಯದಲ್ಲಿ 136 ಕಾಂಗ್ರೆಸ್ ಶಾಸಕರನ್ನು ಗೆಲ್ಲಿಸಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದಾರೆ. ಹೀಗಾಗಿ ಯಾವುದೇ ಕಾರಣಕ್ಕೂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷ ಬಿಟ್ಟು ಬೇರೆ ಪಕ್ಷ ಸೇರುವ ಅನಿವಾರ್ಯತೆ ಇಲ್ಲ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ತಿರುಗೇಟು ನೀಡಿದರು.
ಮಾಜಿ ಸಚಿವ ರಾಜಣ್ಣ ಬಿಜೆಪಿ ಸೇರಲು ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ ಎಂದು ಮಾಗಡಿ ಕ್ಷೇತ್ರದ ಶಾಸಕ ಎಚ್.ಸಿ.ಬಾಲಕೃಷ್ಣ ಸ್ಪೋಟಕ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಶಾಸಕ ಉದಯ್ ಅವರು ಪಕ್ಷಕ್ಕೆ ಯಾರು ಅನಿವಾರ್ಯವಲ್ಲ ಆದರೂ ಸಹ ಅವರು ಕಾಂಗ್ರೆಸ್ ತೊರೆಯುವುದಿಲ್ಲ. ಕಾಂಗ್ರೆಸ್ ಒಂದು ರೀತಿಯ ಸಮುದ್ರವಿದ್ದಂಗೆ ರಾಜಣ್ಣ ಸೇರಿದಂತೆ ಯಾರು ಸಹ ಪಕ್ಷಕ್ಕೆ ಅನಿವಾರ್ಯವಲ್ಲ. ಹೊಸ ಹೊಸ ನಾಯಕರನ್ನು ಹುಟ್ಟು ಹಾಕುವ ಸಾಮರ್ಥ್ಯ ಕಾಂಗ್ರೆಸ್ ಪಕ್ಷಕ್ಕಿದೆ ಪಕ್ಷ ಕಟ್ಟುವಂತಹ ಪ್ರಬಲ ನಾಯಕರು ನಮ್ಮಲ್ಲಿದ್ದಾರೆ. ಮಾಜಿ ಸಚಿವ ಕೆ.ಎನ್.ರಾಜಣ್ಣ ಸಹ ಉತ್ತಮ ನಾಯಕರೇ ಪಕ್ಷ ಅವರನ್ನು ಸಚಿವ ಸ್ಥಾನದಿಂದ ಹೊರಗಿಟ್ಟಿರಬಹುದೇ ಹೊರತು ಅವರು ಪಕ್ಷ ಬಿಡದೇ ನಮ್ಮ ಜೊತೆಯೇ ಇದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕೆಲವು ಮಠಾಧೀಶರು ಮಂತ್ರಿ ಸ್ಥಾನ ಕಳೆದುಕೊಂಡಿರುವ ರಾಜಣ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಸಮಾಧಾನದ ಮಾತುಗಳನ್ನಾಡಿದ್ದಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ರಾಜಣ್ಣ ಅವರಿಗೆ ಸಚಿವ ಸ್ಥಾನ ನೀಡುವುದು ಹೈಕಮಾಂಡ್ ಗೆ ಬಿಟ್ಟಿದ್ದು ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ ಗ್ರಾ.ಪಂ ಅಧ್ಯಕ್ಷ ಸತೀಶ್, ಸದಸ್ಯ ಸಿದ್ದಪ್ಪ, ಶ್ರೀಧರ್, ಜಯರಾಂ, ಧ್ರುವ ಕುಮಾರ್, ಮಧುಕುಮಾರ್, ನಾಗೇಶ್, ನಯನ, ಚಿಕ್ಕಣ್ಣ, ಎಇ ಮಂಜುನಾಥ್, ಗುತ್ತಿಗೆದಾರ ರವೀಂದ್ರ ಸೇರಿದಂತೆ ಮತ್ತಿತರರು ಇದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ
ಬೆಂಗಳೂರಲ್ಲಿ ಪ್ರಯಾಣಿಕರ ಸಮೇತ ಬಸ್ ಸೀಜ್ ಮಾಡಿದ ಟ್ರಾಫಿಕ್ ಪೊಲೀಸರು: ಕಾರಣವೇನು ಗೊತ್ತಾ?
BREAKING: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗೆ ಆಯುಕ್ತರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ