ಬೆಂಗಳೂರು: ಸನಾತನ ಧರ್ಮದ ಕುರಿತಂತೆ ವಿವಾದಾತ್ಮಕ ಹೇಳಿಕೆ ಪ್ರಕರಣದಲ್ಲಿ ತಮಿಳುನಾಡಿನ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಅವರಿಗೆ ಜಾಮೀನು ಮಂಜೂರಾಗಿದೆ.
ಇಂದು ಈ ಪ್ರಕರಣ ಕುರಿತಂತೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಉದಯನಿಧಿ ಸ್ಟಾಲಿನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಸಿತು.
ನಗರದ ಸಾಮಾಜಿಕ ಕಾರ್ಯಕರ್ತ ಪರಮೇಶ್ವರ್ ಸಲ್ಲಿಸಿದ್ದ ಅರ್ಜಿಯನ್ನು ಆಧರಿಸಿ, ನ್ಯಾಯಾಲಯವು ಉದಯನಿಧಿ ಸ್ಟಾಲಿನ್ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ಅಲ್ಲದೇ ಖುದ್ದು ವಿಚಾರಣೆಗೆ ಹಾಜರಾಗುವಂತೆಯೂ ಸೂಚಿಸಿತ್ತು.
ಈ ಹಿನ್ನಲೆಯಲ್ಲಿ ಅವರು ಕೋರ್ಟ್ ಗೆ ಖುದ್ದು ವಿಚಾರಣೆಗೆ ಹಾಜರಾಗಿದ್ದರು. ವಾದ, ಪ್ರತಿವಾದವನ್ನು ಆಲಿಸಿದಂತ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ನೀಡಿದೆ. ಅಲ್ಲದೇ ಸುಪ್ರೀಂ ಕೋರ್ಟ್ ನಲ್ಲಿ ಎಲ್ಲಾ ಕೇಸ್ ಗಳನ್ನು ಒಂದೇ ಕಡೆ ವಿಚಾರಣೆ ವರ್ಗಾವಣೆ ಕೋರಿದ್ದಂತ ಅರ್ಜಿಯ ಸಂಬಂಧ ಪ್ರತಿ ಸಲ್ಲಿಸುವಂತೆ ಸೂಚಿಸಿ, ವಿಚಾರಣೆಯನ್ನು ಆಗಸ್ಟ್.8ಕ್ಕೆ ಮುಂದೂಡಿದೆ.
ಅಂದಹಾಗೇ ಕಳೆದ ಸೆಪ್ಟೆಂಬರ್.4, 2024ರಂದು ಚೆನ್ನೈನ ತೇನಂ ಪೇಟೆಯಲ್ಲಿ ನಡೆದಿದ್ದಂತ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದಂತ ಉದಯನಿಧಿ ಸ್ಟಾಲಿನ್ ಅವರು, ಸನಾತನ ಧರ್ಮ ಡೆಂಗಿ, ಮಲೇರಿಯಾ ಹಾಗೂ ಕೊರೋನಾ ಇದ್ದಂತೆ. ಸಾಮಾಜಿಕ ನ್ಯಾಯ, ಸಮಾನತೆಗೆ ಅದು ವಿರುದ್ಧವಾಗಿದೆ. ಅದನ್ನು ನಿರ್ಮೂಲನೆ ಮಾಡುವಂತ ಕೆಲಸ ಆಗಬೇಕು ಎಂಬುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಸಂಬಂಧ ಬೆಂಗಳೂರಲ್ಲಿ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
BIG NEWS : ಅಸಹಜ ಲೈಂಗಿಕ ದೌರ್ಜನ್ಯ ಕೇಸ್ : ಇಂದು ಸೂರಜ್ ರೇವಣ್ಣ ವೈದ್ಯಕೀಯ ಪರೀಕ್ಷೆ | Suraj Revanna
15 ನಿಮಿಷಗಳಲ್ಲಿ 25,000 ಅಡಿ ಎತ್ತರಕ್ಕೆ ಬಿದ್ದ ‘ಕೊರಿಯನ್ ವಿಮಾನ’ | 13 ಪ್ರಯಾಣಿಕರು ಆಸ್ಪತ್ರೆಗೆ ದಾಖಲು