ಉಡುಪಿ : ಉಡುಪಿಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ಮದುಮೇಹ, ರಕ್ತದೊತ್ತಡದಿಂದ ಬಳುತ್ತಿದ್ದ ತಾಯಿಯೊಬ್ಬರು ಮೃತಪ್ಪಟ್ಟಿದ್ದಾರೆ. ಇದನ್ನು ಅರಿಯದ ಬುದ್ಧಿಮಾಂದ್ಯ ಪುತ್ರಿ, ತಾಯಿ ಶವದ ಜೊತೆ ನಾಲ್ಕು ದಿನ ಕಳೆದಿದ್ದಾಳೆ. ನಂತರ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ದಾಸನಹಾಡಿ ಗ್ರಾಮದಲ್ಲಿ ನಡೆದಿದೆ.
ಹೌದು ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ದಾಸನಹಾಡಿ ಗ್ರಾಮದ ನಿವಾಸಿಗಳಾಗಿದ್ದ ತಾಯಿ ಜಯಂತಿ ಶೆಟ್ಟಿ (62), ಮಗಳು ಪ್ರಗತಿ ಶೆಟ್ಟಿ (32) ನಿಧನರಾಗಿದ್ದಾರೆ ಎಂದು ಹೇಳಲಾಗುತ್ತಿದೆ.ಜಯಂತಿ ಶೆಟ್ಟಿ ಮಧುಮೇಹ, ರಕ್ತದೊತ್ತಡದಿಂದ ಬಳಲುತ್ತಿದ್ದರು. ಇನ್ನು ಪುತ್ರಿ ಪ್ರಗತಿ ಶೆಟ್ಟಿ ಬುದ್ಧಿಮಾಂದ್ಯರಾಗಿದ್ದರು. ಕಾಯಿಲೆಯಿಂದ ಬಳುತ್ತಿದ್ದ ಜಯಂತಿ ಶೆಟ್ಟಿ ನಾಲ್ಕು ದಿನದಿಂದೆ ಮನೆಯಲ್ಲಿ ಮೃತಪಟ್ಟಿದ್ದಾರೆ. ಇದನ್ನು ಅರಿಯದ ಬುದ್ಧಿಮಾಂದ್ಯ ಪುತ್ರಿ ಪ್ರಗತಿ ಶೆಟ್ಟಿ ತಾಯಿಯ ಶವದ ಜೊತೆಗೆ ನಾಲ್ಕು ದಿನ ಅನ್ನ, ನೀರಿಲ್ಲದೆ ಕಳೆದಿದ್ದಾರೆ.
ಮನೆಯಲ್ಲಿ ಜಯಂತಿಯವರು ಸತ್ತಿದ್ದರಿಂದ ದೇಹದಿಂದ ದುರ್ವಾಸನೆ ಬರಲು ಆರಂಭಿಸಿದೆ. ಇದರಿಂದ ಅನುಮಾನ ಹಾಕೊಂಡ ಅಕ್ಕ ಪಕ್ಕದವರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಪೊಲೀಸರು ಆಗಮಿಸಿ ಪ್ರಜ್ಞಾಹೀನ ಸ್ಥಿತಿ ಹೊಂದಿದ್ದ ಪ್ರಗತಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ.ಆದರೆ ತೀವ್ರ ಅಸ್ವಸ್ಥಗೊಂಡಿದ್ದ ಪ್ರಗತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಜಯಂತಿ ಶವವನ್ನು ಕೂಡ ತಾಲೂಕು ಆಸ್ಪತ್ರೆಗೆ ಸಾಗಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನೆರವೇರಿದೆ.ಇತ್ತ ಆಸ್ಪತ್ರೆಯಲ್ಲಿ ಪ್ರಗತಿ ಶೆಟ್ಟಿ ಚಿಕಿತ್ಸೆ ಫಲಿಸದೆ ಮೃತಪಟ್ಟರು. ಬಳಿಕ ಪ್ರಗತಿ ಶೆಟ್ಟಿ ಅವರ ಮರಣೋತ್ತರ ಪರೀಕ್ಷೆ ನೆರವೇರಿದೆ. ನಂತರ ಕುಂದಾಪುರ ಪೊಲೀಸರು ಹೆಂಗವಳ್ಳಿಯಲ್ಲಿ ತಾಯಿ ಮತ್ತು ಮಗಳ ಅಂತ್ಯಸಂಸ್ಕಾರವನ್ನು ಒಟ್ಟಿಗೆ ನೆರವೇರಿಸಿದರು. ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ ನಡೆದಿದೆ.