ಮಂಗಳೂರು : ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಹಿನ್ನೆಲೆ ಎಚ್ಚರಿಕೆ ವಹಿಸಬೇಕು. ಯಕ್ಷಗಾನ, ಕೋಲ, ಉತ್ಸವ, ಕಂಬಳ, ದೀಪೋತ್ಸವದಂತಹ ಕಾರ್ಯಕ್ರಮಗಳು ನಡೆಯುತ್ತಿದೆ, ಜನಸಂದಣಿ ಹೆಚ್ಚಿದ್ದ ಜಾಗದಲ್ಲಿ ಎಚ್ಚರಿಕೆ ವಹಿಸಬೇಕು ಎಂದು ಉಡುಪಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಕರಾವಳಿಯಲ್ಲಿ ಮುಂದೆ ಯಕ್ಷಗಾನ, ಕೋಲ, ಉತ್ಸವ, ಕಂಬಳ, ದೀಪೋತ್ಸವದಂತಹ ಕಾರ್ಯಕ್ರಮಗಳು ನಡೆಯುತ್ತದೆ, ಜನಸಂದಣಿ ಹೆಚ್ಚಿದ್ದ ಜಾಗದಲ್ಲಿ ಎಚ್ಚರಿಕೆ ವಹಿಸಬೇಕು, ಕರಾವಳಿಯಲ್ಲಿ ಮುಂದಿನ ದಿನಗಳಲ್ಲಿ ಉಗ್ರರು ಹಿಂದೂಗಳ ಸೋಗಿನಲ್ಲಿ ಬಂದು ದುಷ್ಕೃತ್ಯ ನಡೆಸುವ ಅಪಾಯವಿರುತ್ತದೆ’ ಎಂದು ಉಡುಪಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
‘ಎಲ್ಲಿ ಯಾವುದೇ ಸಂದೇಹ ಉಂಟು ಮಾಡುವ ವ್ಯಕ್ತಿ, ವಸ್ತುಗಳು ಇದ್ದರೆ ಕೂಡಲೇ ಪೊಲೀಸರಿಗೆ ತಿಳಿಸಬೇಕು. ಮೊಬೈಲ್ ಹಾಗೂ ದಾಖಲೆ ಕಳೆದುಕೊಂಡರೆ ಜನರು ಕೂಡಲೇ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಉಡುಪಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಭಯೋತ್ಪಾದ ಕೃತ್ಯಗಳನ್ನು ಎಸಗಿ ಅದನ್ನು ಹಿಂದೂಗಳ ಮೇಲೆ ಕಟ್ಟುವ ಪ್ರಯತ್ನ ಮಾಡಲಾಗುತ್ತಿದೆ. ಆದ್ದರಿಂದ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.