ಉಡುಪಿ: ರೋಗಿಯನ್ನು ಕರೆದೊಯ್ಯುತ್ತಿದ್ದಂತ ಆ್ಯಂಬುಲೆನ್ಸ್ ಟೋಲ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ, ಭೀಕರ ಅಪಘಾತ ( Accident ) ಸಂಭವಿಸಿ ಮೂವರು ಸಾವನ್ನಪ್ಪಿ, ಮತ್ತೋರ್ವ ಗಾಯಗೊಂಡಿರುವ ಘಟನೆ ಉಡುಪಿಯ ಬೈಂದೂರು ತಾಲೂಕಿನಲ್ಲಿ ನಡೆದಿದೆ.
BIG UPDATE: ‘ನಟ ಕಿಚ್ಚ ಸುದೀಪ್’ಗೆ ಕೊರೋನಾ ಅಲ್ಲ, ‘ವೈರಲ್ ಫೀವರ್’ ಅಷ್ಟೇ – ನಿರ್ಮಾಪಕ ಜಾಕ್ ಮಂಜು ಸ್ಪಷ್ಟನೆ
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಟೋಲ್ ಬಳಿಯಲ್ಲಿ ಹೊನ್ನಾವರದಿಂದ ಕುಂದಾಪುರಕ್ಕೆ ರೋಗಿಯನ್ನು ಸಾಗಿಸುತ್ತಿದ್ದಂತ ಆ್ಯಂಬುಲೆನ್ಸ್ ಟೋಲ್ ಕಂಬಕ್ಕೆ ಡಿಕ್ಕಿಯಾಗಿದೆ.
ಆ್ಯಂಬುಲೆನ್ಸ್ ಟೋಲ್ ಕಂಬಕ್ಕೆ ಡಿಕ್ಕಿಯಾಗುತ್ತಿದ್ದಂತೆ ಅದರಲ್ಲಿದ್ದಂತ ರೋಗಿ, ರೋಗಿಯ ಪತ್ನಿ ಹಾಗೂ ಆ್ಯಂಬುಲೆನ್ಸ್ ಸಿಬ್ಬಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಇನ್ನೂ ಟೋಲ್ ಬಳಿಯಲ್ಲಿದ್ದಂತ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.