ಉಡುಪಿ : ಪತಿಯ ಕಿರುಕುಳಕ್ಕೆ ಬೇಸತ್ತು ಪತ್ನಿಯೊಬ್ಬಳು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರಲ್ಲಿ ನಡೆದಿದೆ.ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರನ್ನು ಕುಂದಾಪುರದ ಕೊರಗ ಎಂಬವರ ಮಗಳು ಹಾಗೂ ಗಂಗಾನಾಡು ನಿವಾಸಿ ವಿಷ್ಣು ಎಂಬವರ ಪತ್ನಿ ರಂಜಿತಾ (28) ಎಂದು ಗುರುತಿಸಲಾಗಿದೆ.ಇವರು ಜ.13ರಂದು ರಾತ್ರಿ ಮನೆಯಿಂದ ಹೋದವರು ನಾಪತ್ತೆಯಾಗಿದ್ದು, ಹುಡುಕಾಡಿ ದಾಗ ಆಕೆ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.