ಉಡುಪಿ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಮನೆಯಲ್ಲಿದ್ದ ಇಲಿ ಪಾಷಾಣವನ್ನು ತಿಳಿಯದೇ ತಿಂದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಬಳಿಯ ಪಡುತೋನ್ಸೆ ಗ್ರಾಮದ ಗುಜ್ಜರಬೆಟ್ಟು ಎಂಬಲ್ಲಿ ನಡೆದಿದೆ
ಮೃತರನ್ನು ಗುಜ್ಜರಬೆಟ್ಟು ನಿವಾಸಿ ಸರೋಜ(51) ಎಂದು ಗುರುತಿಸಲಾಗಿದೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಇವರು, ಎ.4ರಂದು ಮಧ್ಯಾಹ್ನ ಮನೆಯಲ್ಲಿ ತಂದಿಟ್ಟಿದ್ದ ಇಲಿ ಪಾಷಾಣವನ್ನು ತಿಳಿಯದೆ ಸೇವಿಸಿದ್ದರು.
ಇದರಿಂದ ತೀವ್ರ ಅಸ್ವಸ್ಥಗೊಂಡಿದ್ದ ಅವರು ಎ.5ರಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.