Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

ಸೇನಾ ಕ್ಯಾಪ್ಟನ್ ಪ್ರೇಯಸಿಗೆ ಮಾಡಿದ ಪ್ರಪೋಸ್ ಪುಲ್ ವೈರಲ್; ನೆಟ್ಟಿಗರ ಕಾಮೆಂಟ್ ಸುರಿಮಳೆ

​ನಾರ್ವೆ ಚೆಸ್: ಗುಕೇಶ್ ವಿರುದ್ಧ ರೋಚಕ ಜಯ ಸಾಧಿಸಿದ ಪ್ರಜ್ಞಾನಂದ; ಪ್ರಶಸ್ತಿ ರೇಸ್‌ನಲ್ಲಿ ಮುನ್ನಡೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » RSS ನ ಬಂಡವಾಳ, ತಾರತಮ್ಯದ ಆಚರಣೆ ಗೊತ್ತಾಗಿ ಉಗ್ರಪ್ಪ RSS ತೊರೆದು ಸಾಮಾಜಿಕ ನ್ಯಾಯದ ಪರವಾಗಿ ನಿಂತರು: ಸಿ.ಎಂ.ಸಿದ್ದರಾಮಯ್ಯ
KARNATAKA

RSS ನ ಬಂಡವಾಳ, ತಾರತಮ್ಯದ ಆಚರಣೆ ಗೊತ್ತಾಗಿ ಉಗ್ರಪ್ಪ RSS ತೊರೆದು ಸಾಮಾಜಿಕ ನ್ಯಾಯದ ಪರವಾಗಿ ನಿಂತರು: ಸಿ.ಎಂ.ಸಿದ್ದರಾಮಯ್ಯ

By ಅವಿನಾಶ್‌ ಆರ್‌ ಭೀಮಸಂದ್ರ

ಬೆಂಗಳೂರು : ವಿ.ಎಸ್.ಉಗ್ರಪ್ಪ ಅವರು ಸಮರ್ಥರೂ ಹೌದು, ಜನ ನಾಯಕರೂ ಹೌದು. ಧ್ವನಿ ಇಲ್ಲದವರ ದನಿ ಆಗಿರುವವರು ವಿ.ಎಸ್.ಉಗ್ರಪ್ಪ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಮಾಜಿ ಸಂಸದರಾದ ವಿ.ಎಸ್.ಉಗ್ರಪ್ಪ ಅವರ ಬದುಕು, ಹೋರಾಟವನ್ನು ಕಟ್ಟಿಕೊಟ್ಟಿರುವ ಸಮರ್ಥ ಜನ ನಾಯಕ ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದರು.

ಉಗ್ರಪ್ಪ ಅವರು ಸಮರ್ಥರೂ ಹೌದು, ಜನ ನಾಯಕರೂ ಹೌದು. ವಿದ್ಯಾರ್ಥಿ ಜೀವನದಲ್ಲೇ ಜನಹೋರಾಟದಲ್ಲಿ ಭಾಗಿಯಾಗಿ ಜೈಲು ಸೇರಿದ್ದವರು ಎಂದು ಉಗ್ರಪ್ಪ ಅವರ ಹೋರಾಟದ ದಿನಗಳನ್ನು ಸ್ಮರಿಸಿದರು.

ಉಗ್ರಪ್ಪ ಬಹಳ ನಿಷ್ಠುರವಾದಿ. ಸಾರ್ವಜನಿಕ ಜೀವನದಲ್ಲಿ ಮೌಲ್ಯಗಳ ವಿಚಾರದಲ್ಲಿ ಯಾರ ಜೊತೆಗೂ ರಾಜಿ ಮಾಡಿಕೊಳ್ಳುವುದಿಲ್ಲ. ರಾಜಕೀಯ ಹೋರಾಟದಲ್ಲಿ ಉಗ್ರರಾಗಿದ್ದರೂ‌ ಮನೆಯಲ್ಲಿ ಮಾತ್ರ ಸೌಮ್ಯವಾದಿ ಎಂದು ಹಾಸ್ಯ ಚಟಾಕಿ ಹಾರಿಸಿದರು.

ಸಂವಿಧಾನದ ಆಚೆಗೆ ಯೋಚಿಸುವವರಲ್ಲ. ವಕೀಲರಾಗಿ ಹಲವಾರು ವರ್ಷ ಸಂವಿಧಾನದ ಪಾಠ ಮಾಡಿ ಈಗ ಸಂವಿಧಾನ‌ ನಾಲಗೆ ತುದಿಯಲ್ಲೇ ಇದೆ. ತಪ್ಪುಗಳನ್ನು ಹುಡುಕುವುದರಲ್ಲಿ ಉಗ್ರಪ್ಪರು ನಿಸ್ಸೀಮರು ಎಂದು ಮೆಚ್ಚುಗೆ ಸೂಚಿಸಿದರು.

ಎಲ್ಲಾ ಕಾಲದಲ್ಲೂ ದ್ವನಿ ಇಲ್ಲದವರ ಪರವಾಗಿ ಕೆಲಸ ಮಾಡುತ್ತಾ ಬಂದಿದಾರೆ. ಇವರ ಪ್ರತೀ ಮಾತು, ಭಾಷಣ ಅವಕಾಶ ವಂಚಿತರ ಪರವಾಗಿಯೇ ಇರುತ್ತದೆ ಎಂದರು.

ಕಾನೂನುಗಳನ್ನು ಚೆನ್ನಾಗಿ ಅರಿತಿರುವ ಉಗ್ರಪ್ಪ ಅವರ ಅನುಭವ, ತಿಳಿವಳಿಕೆ ಪಕ್ಷ ಸಂಘಟನೆಗೆ ಬಹಳ ನೆರವು ನೀಡಿದೆ. ರಾಜಕಾರಣದ ಕೆಲವು ಹಂತಗಳಲ್ಲಿ ಉಗ್ರಪ್ಪ ಅವರಿಗೆ ನೆರವಾಗಲು ಸಾಧ್ಯವಾಗಿದೆ. ಉಳಿದ ಸಂದರ್ಭಗಳಲ್ಲಿ ಸಾಧ್ಯವಾಗಿಲ್ಲ. ಆದರೆ ಎಲ್ಲಾ ಏರಿಳಿತಗಳಲ್ಲೂ ಉಗ್ರಪ್ಪ ಅವರು ತಮ್ಮ ಸಿದ್ಧಾಂತ ಹಾಗೂ ಮೌಲ್ಯಗಳಲ್ಲಿ ರಾಜಿ ಮಾಡಿಕೊಳ್ಳಲಿಲ್ಲ ಎಂದು ಮೆಚ್ಚುಗೆ ಸೂಚಿಸಿದರು.

ಉಗ್ರಪ್ಪ ಅವರಿಗೆ ಇನ್ನೂ ಹೆಚ್ಚಿನ ಸ್ಥಾನಮಾನ‌ ಸಿಗಬೇಕಿತ್ತು. ಸಿಕ್ಕಿಲ್ಲ ಎನ್ನುವ ಬೇಸರ ನನಗೂ ಇದೆ. ಮುಂದೆ ಅವಕಾಶ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ರೆಡ್ಡಿ ಬ್ರದರ್ಸ್ ವಿರುದ್ಧ ತೋಳು ತಟ್ಟಿದ ಹೋರಾಟಕ್ಕೆ ಉಗ್ರಪ್ಪರೂ ಕಾರಣ

ನಾನು ಬಳ್ಳಾರಿ ಪಾದಯಾತ್ರೆ ಮಾಡುವುದಕ್ಕೂ ಮೊದಲೇ ಉಗ್ರಪ್ಪ ಗಣಿ ಹಗರಣ ಮತ್ತು ರೆಡ್ಡಿ ಬ್ರದರ್ಸ್ ವಿಚಾರದ ಬಗ್ಗೆ ಸತ್ಯ ಶೋಧನಾ ವರದಿ ನೀಡಿದ್ದರು. ಈ ವರದಿ ಬಳ್ಳಾರಿ ಪಾದಯಾತ್ರೆಗೆ ನಾನು ತೋಳು ತಟ್ಟುವಂತಾಯಿತು. ಪಾದಯಾತ್ರೆ ಯಶಸ್ವಿಗೆ ಉಗ್ರಪ್ಪ ಅವರ ಪಾತ್ರ ಕೂಡ ಪ್ರಮುಖವಾದದ್ದು ಎಂದರು.

ಉಗ್ರಪ್ಪ ಮತ್ತು ನಾನು ಸಾಮಾಜಿಕ ನ್ಯಾಯದ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಂಡವರಲ್ಲ. ಈ ಕಾರಣಕ್ಕೇ ನನಗೆ ಮಸಿ ಬಳಿಯಲು ಕೆಲವರು ಯತ್ನಿಸುತ್ತಿದ್ದಾರೆ. ಅವರ ಈ ಪ್ರಯತ್ನಗಳು ಹೇಗೆ ಯಶಸ್ವಿ ಆಗ್ತದೆ ನಾನೂ ನೋಡ್ತೀನಿ ಎಂದು ಇದೇ ಸಂದರ್ಭದಲ್ಲಿ ಎಚ್ಚರಿಕೆ ಕೂಡ ರವಾನಿಸಿದರು.

ಉಗ್ರಪ್ಪ ಮತ್ತು ಪಿ.ಜಿ.ಆರ್.ಸಿಂದ್ಯಾ ಇಬ್ಬರೂ RSS ನಲ್ಲಿದ್ದವರು. ಇಬ್ಬರಿಗೂ RSS ನ ದ್ವೇಷದ, ತಾರತಮ್ಯದ, ಜಾತಿವಾದದ ಸತ್ಯ ಗೊತ್ತಾಗಿ RSS ನಿಂದ ಹೊರಗೆ ಬಂದು ಸಾಮಾಜಿಕ ನ್ಯಾಯದ ಪರವಾಗಿ ನಿಂತಿದ್ದು, ಪ್ರಬುದ್ಧ ಜನಪರ ರಾಜಕಾರಣಿ ಎಂದರು.

ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್, ಸಾಹಿತಿ ಬರಗೂರು ರಾಮಚಂದ್ರಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಮಾಜಿ ಸಚಿವ ಹೆಚ್.ಎಂ.ರೇವಣ್ಣ, ಮಾಜಿ ಸಚಿವ ಪಿ.ಜಿ.ಆರ್.ಸಿಂದ್ಯಾ, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ಸಮಾಜದ ಗುರುಗಳಾದ ಆತ್ಮಾನಂದ ಸ್ವಾಮೀಜಿ, ರಾಮಲಿಂಗೇಶ್ವರ ಸ್ವಾಮೀಜಿ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು

discriminatory practices: CM Siddaramaiah Ugrappa left RSS and stood for social justice after learning about RSS's capital
Share. Facebook Twitter LinkedIn WhatsApp Email

Related Posts

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

1 Min Read

BREAKING: ಕಲಬುರ್ಗಿಯಲ್ಲಿ ಪ್ರೀತಿ ನಿರಾಕರಣೆಯ ಭೀತಿಯಲ್ಲಿ ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ!

1 Min Read

BREAKING: ವಿಧಾನ ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ ಇಳಿಸಿದ ಕಾಂಗ್ರೆಸ್

1 Min Read
Recent News

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

ಸೇನಾ ಕ್ಯಾಪ್ಟನ್ ಪ್ರೇಯಸಿಗೆ ಮಾಡಿದ ಪ್ರಪೋಸ್ ಪುಲ್ ವೈರಲ್; ನೆಟ್ಟಿಗರ ಕಾಮೆಂಟ್ ಸುರಿಮಳೆ

​ನಾರ್ವೆ ಚೆಸ್: ಗುಕೇಶ್ ವಿರುದ್ಧ ರೋಚಕ ಜಯ ಸಾಧಿಸಿದ ಪ್ರಜ್ಞಾನಂದ; ಪ್ರಶಸ್ತಿ ರೇಸ್‌ನಲ್ಲಿ ಮುನ್ನಡೆ!

BREAKING: ಕಲಬುರ್ಗಿಯಲ್ಲಿ ಪ್ರೀತಿ ನಿರಾಕರಣೆಯ ಭೀತಿಯಲ್ಲಿ ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ!

State News
KARNATAKA

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು : ಇಂಧನ ಇಲಾಖೆಯಲ್ಲಿ ಹಿರಿಯ ಅಧಿಕಾರಿಗಳ ನೇಮಕ ಹಾಗೂ ಖಾತೆ ಹಂಚಿಕೆ ಕುರಿತು ಅಸಮಾಧಾನ ಇಲ್ಲ ಎಂದಿರುವ ಇಂಧನ…

BREAKING: ಕಲಬುರ್ಗಿಯಲ್ಲಿ ಪ್ರೀತಿ ನಿರಾಕರಣೆಯ ಭೀತಿಯಲ್ಲಿ ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ!

BREAKING: ವಿಧಾನ ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ ಇಳಿಸಿದ ಕಾಂಗ್ರೆಸ್

BREAKING: ಧಾರವಾಡ ವಿವಿಯಲ್ಲಿ ಸಂಶೋಧನಾ ವಿದ್ಯಾರ್ಥಿಗೆ ಪ್ರಾಧ್ಯಾಪಕನಿಂದಲೇ ಕಿರುಕುಳ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.