ಬೆಂಗಳೂರು: ನಗರದಲ್ಲಿ ನಡೆದಿದೆ ಎನ್ನಲಾಗಿರುವಂತ ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮ ಪ್ರಕರಣ ನಂತ್ರ, ರಾಜ್ಯ ಸರ್ಕಾರದಿಂದ ಮಹತ್ವದ ಬದಲಾವಣೆ ಕೈಗೊಳ್ಳಲಾಗುತ್ತಿದೆ. ಇದೀಗ ಬಿಬಿಎಂಪಿಯ ವಿಶೇಷ ಚುನಾವಣಾ ಆಯುಕ್ತರನ್ನಾಗಿ ಐಎಎಸ್ ಅಧಿಕಾರಿ ಉಜ್ವಲ್ ಕುಮಾರ್ ಘೋಷ್ ( IAS Officer Ujjwal Kumar Ghosh ) ನೇಮಿಸಲಾಗಿದೆ.
Job Alert: ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ‘ನಮ್ಮ ಕ್ಲಿನಿಕ್’ನಲ್ಲಿ ಖಾಲಿ ಇರುವ ‘ವೈದ್ಯರ ಹುದ್ದೆ’ ಅರ್ಜಿ ಆಹ್ವಾನ
ಈ ಕುರಿತು ಇಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ಕೇಡರ್ ನ 2008ನೇ ಬ್ಯಾಚ್ ನ ಐಎಎಸ್ ಅಧಿಕಾರಿ ಉಜ್ವಲ್ ಕುಮಾರ್ ಘೋಷ್ ರನ್ನು ಖಜಾನೆಯ ಕಮೀಷನರ್ ಹುದ್ದೆಯಿಂದ ವರ್ಗಾವಣೆಗೊಳಿಸಲಾಗಿದೆ. ಅವರನ್ನು ಸ್ಪೆಷಲ್ ಕಮೀಷನರ್(ಚುನಾವಣೆ), ಬಿಬಿಎಂಪಿ ಇಲ್ಲಿಗೆ ನೇಮಿಸಿದೆ.
ರಾಜ್ಯ ಸರ್ಕಾರದಿಂದ ಇಬ್ಬರು ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ
ಬೆಂಗಳೂರು ನಗರದಲ್ಲಿ ನಡೆದಿದ್ದಂತ ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮ ಸಂಬಂಧ ಕೆಲ ಅಧಿಕಾರಿಗಳನ್ನು ಚುನಾವಣಾ ಆಯೋಗವು ಅಮಾನತುಗೊಳಿಸಿದೆ. ಈ ಬೆನ್ನಲ್ಲೇ, ರಾಜ್ಯ ಸರ್ಕಾರದಿಂದ ಇಬ್ಬರು ಐಎಎಸ್ ಅಧಿಕಾರಿಗಳಿಗೆ ( IAS Officer ) ಹೆಚ್ಚುವರಿ ಹೊಣೆಗಾರಿಕೆ ನೀಡಿದೆ.
BIGG NEWS : ಇಂದು ಸಂಜೆ ಸಿಎಂ ಬೊಮ್ಮಾಯಿ ದೆಹಲಿಗೆ : ಸಚಿವ ಸಂಪುಟ ವಿಸ್ತರಣೆಗೆ ಸಿಗುತ್ತಾ ಗ್ರೀನ್ ಸಿಗ್ನಲ್?
ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು, ಬಿಬಿಎಂಪಿಯ ಘನತ್ಯಾಜ್ಯ ನಿರ್ವಹಣೆಯ ಸ್ಪೆಷಲ್ ಕಮೀಷನರ್ ಆಗಿದ್ದಂತ ಐಎಎಸ್ ಅಧಿಕಾರಿ ಡಾ. ಹರೀಶ್ ಕುಮಾರ್ ಕೆ ಅವರಿಗೆ ಬಿಬಿಎಂಪಿಯ ಸ್ಪೆಷಲ್ ಕಮೀಷನರ್ ( ಆಡಳಿತಾಧಿಕಾರಿ) ಆಗಿ ಹೆಚ್ಚುವರಿ ಹೊಣೆಗಾರಿಕೆ ನೀಡಿದೆ.
ಇನ್ನೂ ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿಯ ಸಿಇಓ ಆಗಿದ್ದಂತ ಸಂಗಪ್ಪ ಅವರಿಗೆ, ಬೆಂಗಳೂರು ನಗರ ಜಿಲ್ಲಾಧಿಕಾರಿಯ ಹೆಚ್ಚುವರಿ ಹೊಣೆಗಾರಿಕೆಯನ್ನು ನೀಡಿ ಆದೇಶಿಸಿದೆ.