ಮಾಸ್ಕೋ: ರಷ್ಯಾದ ಕುರ್ಸ್ಕ್ ಪ್ರದೇಶದ ಉಕ್ರೇನ್ ನಿಯಂತ್ರಣದಲ್ಲಿರುವ ಬೋರ್ಡಿಂಗ್ ಶಾಲೆಯ ಮೇಲೆ ರಷ್ಯಾದ ವೈಮಾನಿಕ ದಾಳಿ ಘಟನೆಯಲ್ಲಿ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಮತ್ತು ಡಜನ್ಗಟ್ಟಲೆ ಜನರು ಗಾಯಗೊಂಡಿದ್ದಾರೆ ಎಂದು ಉಕ್ರೇನ್ ಮಿಲಿಟರಿ ಶನಿವಾರ ತಿಳಿಸಿದೆ
ರಾತ್ರಿ 10 ಗಂಟೆಗೆ ಅವಶೇಷಗಳನ್ನು ತೆರವುಗೊಳಿಸುವ ರಕ್ಷಣಾ ಪ್ರಯತ್ನಗಳು ನಡೆಯುತ್ತಿವೆ ಎಂದು ಉಕ್ರೇನ್ ಜನರಲ್ ಸ್ಟಾಫ್ ಹೇಳಿಕೆಯಲ್ಲಿ ತಿಳಿಸಿದೆ. ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, 84 ಮಂದಿಯನ್ನು ರಕ್ಷಿಸಲಾಗಿದೆ ಅಥವಾ ವೈದ್ಯಕೀಯ ನೆರವು ನೀಡಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ