ಬೆಳಗಾವಿ: ಉಮೇಶ್ ಕತ್ತಿ ವಿಧಿವಶರಾದ ಹಿನ್ನೆಲೆ ಹುಟ್ಟೂರು ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ. ಕತ್ತಿ ಅವರ ಅಕಾಲಿಕ ನಿಧನದಿಂದ ರಾಕೀಯ ಕ್ಷೇತ್ರಕ್ಕೆ ತುಂಬಾ ನಷ್ಟವಾಗಿದ್ದು, ಅವರ ಆಪ್ತರೆಲ್ಲ ಕಂಬನಿ ಮಿಡಿದಿದ್ದಾರೆ.
BIGG NEWS : ಹೃದಯಾಘಾತದಿಂದ ಸಚಿವ ಉಮೇಶ್ ಕತ್ತಿ ನಿಧನ : ಬೆಲ್ಲದ ಬಾಗೇವಾಡಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ
ಇಂದು ಸಂಜೆ 5 ಗಂಟೆಗೆ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆ ನಡೆಯಲಿದೆ. ಅವರ ತೋಟದಲ್ಲಿರುವ ತಂದೆ-ತಾಯಿ ಸಮಾಧಿ ಪಕ್ಕದಲ್ಲೇ ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆ ನಡೆಯಲಿದೆ. ಈಗಾಗಲೇ ಗ್ರಾಮದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ತೆ ಮಾಡಲಾಗಿದೆ. ಇಷ್ಟು ಹೊತ್ತಿಗಾಗಲೇ ಅವರ ಪಾರ್ಥಿವ ಶರೀರ ಬೆಳಗಾವಿಗೆ ತಲುಪಬೇಕಿತ್ತು. ಆದರೆ ಹವಾಮಾನ ವೈಪರೀತ್ಯದಿಂದ ಏರ್ ಲಿಫ್ಟ್ ವಿಳಂಬವಾಗುತ್ತಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಏರ್ ಲಿಫ್ಟ್ ಮೂಲಕ ಉಮೇಶ ಕತ್ತಿ ಪಾರ್ಥಿವ ಶರೀರ ರವಾನಿಸಲಾಗಿದೆ.