ಬೆಳಗಾವಿ: ಸಚಿವ ಉಮೇಶ್ ಕತ್ತಿ ಅವರ ಹೃದಯಾಘಾತದಿಂದ ನಿಧನ ಹೊಂದಿದ್ದರು. ಅವರು ಅಂತ್ಯಕ್ರಿಯೆ ನಿನ್ನೆ ಸಂಜೆ ಹುಟ್ಟೂರಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿರುವ ನಡೆಯಿತ್ತು.ಹೀಗಾಗಿ ಇಂದು ಅವರ ಮನೆಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
BIGG NEWS: ಹಿಜಾಬ್ ವಿವಾದ; ವಿಚಾರಣೆ ಸೋಮವಾರಕ್ಕೆ ಮುಂದೂಡಿದ ಸುಪ್ರೀಂಕೋರ್ಟ್
ಬಳಿಕ ಮಾತನಾಡಿದ ಅವರು, ಉಮೇಶ್ ಕತ್ತಿ ಅವರ ರಾಜಕೀಯ ಜೀವನ ಪುಸ್ತಕವಾಗಬೇಕು. ಸಚಿವ ಉಮೇಶ್ ಕತ್ತಿ ನನ್ನ ಆತ್ಮೀಯ ಮಿತ್ರ. ಹೀಗಾಗಿ ನಾವು ಬೆಂಗಳೂರು ಅತವಾ ದೆಹಲಿಯಲ್ಲಿ ಅನೇಕ ಬಾರಿ ಮಾತುಕತೆ ನಡೆಸಿದ್ದೇನೆ. ರಾಜ್ಯದ ಅಭಿವೃದ್ಧಿ, ಪಕ್ಷ ಕಟ್ಟುವ ಬಗ್ಗೆ ಅನೇಕ ಸಲಹೆ ನೀಡುತ್ತಿದ್ದರು. ಉಮೇಶ್ ಕತ್ತಿ ಬಿಂದಾಸ್ ವ್ಯಕ್ತಿಯಾಗಿದ್ದರು. ಅವರ ಅಗಲಿಕೆಯಿಂದಾಗಿ ಪಕ್ಷ ಹಾಗೂ ರಾಜ್ಯಕ್ಕೆ ನಷ್ಟ ಆಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
BIGG NEWS: ಹಿಜಾಬ್ ವಿವಾದ; ವಿಚಾರಣೆ ಸೋಮವಾರಕ್ಕೆ ಮುಂದೂಡಿದ ಸುಪ್ರೀಂಕೋರ್ಟ್
40 ವರ್ಷಗಳ ಕಾಲದಿಂದ ಜನ ಅವರಿಗೆ ಆಶೀರ್ವಾದ ಮಾಡಿದ್ದಾರೆ. ಈ 40 ವರ್ಷಗಳ ರಾಜಕೀಯ ಜೀವನವು ಪುಸ್ತಕದ ರೂಪದಲ್ಲಿ ಹೊರ ಬರಬೇಕು. ಒಬ್ಬ ರಾಜಕೀಯ ನಾಯಕ 40 ವರ್ಷಗಳ ಶಾಸಕನಾಗಿ ಮಾಡಿದ ಕೆಲಸ, ಅವರ ದೂರದೃಷ್ಟಿ, ಅವರ ಆಲೋಚನೆಗಳು ಎಲ್ಲರಿಗೂ ಗೊತ್ತಾಗಬೇಕಿದೆ ಎಂದರು.