Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಪೇಪರ್ ಲೀಕ್ ಸಾಕು, ಇನ್ನು ಸಹಿಸಲು ಸಾಧ್ಯವಿಲ್ಲ’: ದೇಶಾದ್ಯಂತ ಶಾಂತಿಯುತ ಪ್ರತಿಭಟನೆಗೆ Gen-Z ಯುವಕರಿಗೆ ಕೇಜ್ರಿವಾಲ್ ಕರೆ!

ಎಐಎಡಿಎಂಕೆ ಶಾಸಕರಿಗೆ ಬಿಗ್ ಶಾಕ್: TVK ಪರ ಮತ ಹಾಕಿದ 25 ಶಾಸಕರು ಪಕ್ಷದ ಹುದ್ದೆಗಳಿಂದ ವಜಾ!

ಅದಾನಿ ಗ್ರೂಪ್ ಜೊತೆ ಕೈಜೋಡಿಸಿದ ಉಬರ್: ಭಾರತದಲ್ಲಿ ತಲೆಯೆತ್ತಲಿದೆ ಮೊದಲ ಬೃಹತ್ ಡೇಟಾ ಸೆಂಟರ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಅನಿರೀಕ್ಷಿತ ಆಲಿಕಲ್ಲು ಮಳೆ: ಸಮೀಕ್ಷೆ ಪೂರ್ಣಗೊಳಿಸಿ ಬೆಳೆಹಾನಿಗೆ ಪರಿಹಾರ – ಸಚಿವ ಸಂತೋಷ್ ಲಾಡ್
KARNATAKA

ರಾಜ್ಯದಲ್ಲಿ ಅನಿರೀಕ್ಷಿತ ಆಲಿಕಲ್ಲು ಮಳೆ: ಸಮೀಕ್ಷೆ ಪೂರ್ಣಗೊಳಿಸಿ ಬೆಳೆಹಾನಿಗೆ ಪರಿಹಾರ – ಸಚಿವ ಸಂತೋಷ್ ಲಾಡ್

By ವಸಂತ ಬಿ ಈಶ್ವರಗೆರೆ

ಧಾರವಾಡ : ಮಾರ್ಚ್‌ ಮೂರನೇ ವಾರದಲ್ಲಿ ಕಲಘಟಗಿ ಹಾಗೂ ವಿವಿಧ ತಾಲೂಕುಗಳ ಗ್ರಾಮಗಳಲ್ಲಿ ಬಿದ್ದ ಅನಿರೀಕ್ಷಿತ ಆಲ್ಲಿಕಲ್ಲು ಮಳೆಯಿಂದ ಉಂಟಾಗಿರುವ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಪರಿಹಾರ ನೀಡಲು ಸಂಬಂಧಿಸಿದ ಅಧಿಕಾರಿಗಳು ಶೀಘ್ರ ಸಮೀಕ್ಷೆ ಪೂರ್ಣಗೊಳಿಸಿ, ವರದಿ ಸಲ್ಲಿಸಬೇಕು. ಮತ್ತು ನಿಯಮಾನುಸಾರ ರೈತರಿಗೆ ಪರಿಹಾರ ನೀಡಲು ಕ್ರಮವಹಿಸಬೇಕೆಂದು ಕಾರ್ಮಿಕ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಭವನದಲ್ಲಿ ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದ ಸಭೆ ನಡೆಸಿ ಅವರು ಮಾತನಾಡಿದರು.

2015 ರಲ್ಲಿ ಇದೇ ರೀತಿ ಆಕಸ್ಮಿಕವಾಗಿ ಜಿಲ್ಲೆಯಲ್ಲಿ ಮಾರ್ಚ್‌ ತಿಂಗಳಲ್ಲಿ ಆಲಿಕಲ್ಲು ಮಳೆಯಾದ ವರದಿ ಇದೆ. ಈಗ ಹತ್ತು ವರ್ಷಗಳ ನಂತರ ಜಿಲ್ಲೆಯ ಕಲಘಟಗಿ ಹಾಗೂ ಬೇರೆ ತಾಲೂಕುಗಳಲ್ಲಿ ಆಲಿಕಲ್ಲು ಮಳೆಯಾಗಿ ಮಾವು, ಕಬ್ಬು, ವಿವಿಧ ರೀತಿಯ ಕೃಷಿ, ತೋಟಗಾರಿಕೆ ಮತ್ತು ವಾಣಿಜ್ಯ ಬೆಳೆಗಳು ಸೇರಿದಂತೆ ಹಿಂಗಾರು ಹಾಗೂ ಬೇಸಿಗೆ ಅವಧಿಯ ಬೆಳೆಗಳು ಹಾನಿಯಾಗಿವೆ. ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಜಂಟಿ ಸಮೀಕ್ಷೆ ಮಾಡಿ, ಶೀಘ್ರವಾಗಿ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಲು ಸಚಿವರು ನಿರ್ದೇಶಿಸಿದರು.

ಕಲಘಟಗಿ ತಾಲೂಕಿನಲ್ಲಿ ಮಾವು ಬೆಳೆ ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿದೆ. ಮಾವು ಸೇರಿದಂತೆ ವಿವಿಧ ಬೆಳೆಗಳಿಗೆ ರೈತರು ಈಗಾಗಲೇ ಬೆಳೆ ವಿಮೆ ಮಾಡಿಸಿದ್ದಾರೆ. ಅಂತಹ ರೈತರಿಗೆ ವಿಮೆ ಪರಿಹಾರ ದೊರಕುತ್ತದೆ. ಸರ್ಕಾರದಿಂದ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್‍ಡಿಆರ್‍ಎಫ್) ಹಾಗೂ ರಾಜ್ಯ ವಿಪತ್ತು ಪರಿಹಾರ (ಎಸ್‍ಡಿಆರ್‍ಎಫ್) ನಿಧಿಯಿಂದ ನಿಯಮಾನುಸಾರ ಪರಿಹಾರವನ್ನು ನೀಡಲಾಗುತ್ತಿದೆ. ಇದರೊಂದಿಗೆ ಅಕಾಲಿಕವಾಗಿ ಸುರಿದ ಆಲಿಕಲ್ಲು ಮಳೆಯಿಂದ ಉಂಟಾಗಿರುವ ಹಾನಿಗೆ ಸಂಬಂಧಿಸಿದಂತೆ ಪರಿಹಾರ ನೀಡಲು ಸರ್ಕಾರಕ್ಕೆ ವಿಶೇಷ ಅನುದಾನ ಕೋರಿ ಪ್ರಸ್ತಾವನೆಯನ್ನು ಸಲ್ಲಿಸಲು ಜಿಲ್ಲಾಡಳಿತ ಕ್ರಮವಹಿಸಬೇಕೆಂದು ಸಚಿವ ಲಾಡ್ ಅವರು ತಿಳಿಸಿದರು.

ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಹಾನಿಯಾಗಿರುವ ಪ್ರತಿ ಕ್ಷೇತ್ರಕ್ಕೆ ಖುದ್ದು ಭೇಟಿ ನೀಡಿ, ವಿವರಗಳನ್ನು ದಾಖಲಿಸಬೇಕು. ಯಾವುದೇ ರೈತರು ಸಮೀಕ್ಷೆಯಿಂದ ಹೊರಗುಳಿಯದಂತೆ ಹಾಗೂ ಪರಿಹಾರದಿಂದ ವಂಚಿತರಾಗದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಎಚ್ಚರಿಸಿದರು.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಶಾಶ್ವತ ಪರಿಹಾರ ಗುರುತಿಸಬೇಕಿದೆ. ಪ್ರತಿ ಬೇಸಿಗೆ ಅವಧಿಯಲ್ಲಿ ಕೆಲವು ಗ್ರಾಮಗಳಿಗೆ ಹಾಗೂ ನಗರದ ವಾರ್ಡ್‍ಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತದೆ. ಈಗಾಗಲೇ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಬೇಗನೆ ಪೂರ್ಣಗೊಳಿಸಿ, ಸಾರ್ವಜನಿಕರ ಉಪಯೋಗಕ್ಕೆ ಮುಕ್ತಗೊಳಿಸುವ ಅಗತ್ಯವಿದೆ. ಸಂಬಂಧಿಸಿದ ಅಧಿಕಾರಿಗಳು ಈ ಕುರಿತು ಸರಿಯಾದ ಮೇಲ್ವಿಚಾರಣೆ ಮತ್ತು ಮಾರ್ಗದರ್ಶನ ನೀಡಿ, ಕಾಲಮಿತಿಯಲ್ಲಿ ಕಾಮಗಾರಿಗಳು ಪೂರ್ಣಗೊಳ್ಳುವಂತೆ ನೋಡಿಕೊಳ್ಳಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಮಾತನಾಡಿ, ಬೆಳೆಹಾನಿ ಸಮೀಕ್ಷೆ ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲಿ ವರದಿ ಸಲ್ಲಿಸಲಾಗುವುದು. ಮತ್ತು ಬೆಳೆ ವಿಮೆ ಪರಿಹಾರ ವಿತರಿಸಲು ಕ್ರಮವಹಿಸುವಂತೆ ವಿಮೆ ಕಂಪನಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಅಕಾಲಿಕ ಮಳೆಯಿಂದ ಹಾನಿಯಾಗಿರುವ ಹೆಸ್ಕಾಂ ವಿದ್ಯುತ್ ಪರಿಕರಗಳ ಮರುಸ್ಥಾಪನೆಗೆ ಸೂಚಿಸಲಾಗಿದೆ. ಮತ್ತು 14 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ ಕಂಡುಬಂದಿದ್ದು, ತಕ್ಷಣ ಸ್ಥಳೀಯವಾಗಿರುವ ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಜಿಲ್ಲೆಯ ಜನರಿಗೆ ಕುಡಿಯುವ ನೀರು ಸೇರಿದಂತೆ ಯಾವುದೇ ಮೂಲಸೌಕರ್ಯಗಳ ತೊಂದರೆ ಉಂಟಾಗದಂತೆ ಮುನ್ನೆಚರಿಕೆ ವಹಿಸಿ, ಅಗತ್ಯ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.

ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್‌, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಎಸ್.ಘಾಳಿ ಅವರು ಮಾತನಾಡಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ, ವಿಶೇಷ ಭೂಸ್ವಾಧೀನ ಅಧಿಕಾರಿ ಕವಿತಾ ಯೋಗಪ್ಪನವರ, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಹೆಸ್ಕಾಂ ಅಧೀಕ್ಷಕ ಅಭಿಯಂತರ ಕೆ.ವಿ.ಪಾಗಿ, ಪಶುಪಾಲನೆ ಮತ್ತು ಪಶು ವೈದ್ಯಕೀಯ ಇಲಾಖೆಯ ಉಪನಿರ್ದೇಶಕ ಡಾ. ಎಸ್.ವಿ.ಸಂತಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಕೆ.ಸಿ.ಭದ್ರಣನವರ ಹಾಗೂ ಜಿಲ್ಲೆಯ ಎಲ್ಲ ತಾಲೂಕುಗಳ ತಹಶೀಲ್ದಾರರು, ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಕಂದಾಯ, ಪೊಲೀಸ್, ಅಗ್ನಿಶಾಮಕ, ಹೆಸ್ಕಾಂ, ಭೂಸ್ವಾಧೀನ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ದೇಶಾದ್ಯಂತ ವಾರ್ ಲಾಕ್‌ಡೌನ್? ಸೋಷಿಯಲ್ ಮೀಡಿಯಾದ ವೈರಲ್ ಆದೇಶದ ಅಸಲಿ ಸತ್ಯ ಇಲ್ಲಿದೆ | War Lockdown Notice

GOOD NEWS: ರಾಜ್ಯ ಸರ್ಕಾರದಿಂದ ‘ದಿನಗೂಲಿ ನೌಕರ’ರಿಗೆ ಸಿಹಿಸುದ್ದಿ: 5 ಲಕ್ಷದವರೆಗೆ ನಗದು ರಹಿತ ‘ಉಚಿತ ಆರೋಗ್ಯ ಯೋಜನೆ’ ಜಾರಿ

Share. Facebook Twitter LinkedIn WhatsApp Email

Related Posts

ಸುಶಿಕ್ಷಿತ ಯುವಶಕ್ತಿಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ: ಸಚಿವ ಕೆ.ಜೆ.ಜಾರ್ಜ್

2 Mins Read

BREAKING: ಬೆಂಗಳೂರಿನಲ್ಲಿ ಬೃಹತ್ GST ವಂಚನೆ ಜಾಲ ಪತ್ತೆ: ₹410 ಕೋಟಿ ಐಟಿಸಿ ಹಗರಣದ ಕಿಂಗ್‌ಪಿನ್ ಬಂಧನ

2 Mins Read

ಬೆಂಗಳೂರಲ್ಲಿ 23 ಲಕ್ಷಕ್ಕೂ ಹೆಚ್ಚು ಖಾತಾ ಬಿಡುಗಡೆ ದೇಶದಲ್ಲೇ ದಾಖಲೆ: ಡಿಸಿಎಂ ಡಿ ಕೆ ಶಿವಕುಮಾರ್

6 Mins Read
Recent News

‘ಪೇಪರ್ ಲೀಕ್ ಸಾಕು, ಇನ್ನು ಸಹಿಸಲು ಸಾಧ್ಯವಿಲ್ಲ’: ದೇಶಾದ್ಯಂತ ಶಾಂತಿಯುತ ಪ್ರತಿಭಟನೆಗೆ Gen-Z ಯುವಕರಿಗೆ ಕೇಜ್ರಿವಾಲ್ ಕರೆ!

ಎಐಎಡಿಎಂಕೆ ಶಾಸಕರಿಗೆ ಬಿಗ್ ಶಾಕ್: TVK ಪರ ಮತ ಹಾಕಿದ 25 ಶಾಸಕರು ಪಕ್ಷದ ಹುದ್ದೆಗಳಿಂದ ವಜಾ!

ಅದಾನಿ ಗ್ರೂಪ್ ಜೊತೆ ಕೈಜೋಡಿಸಿದ ಉಬರ್: ಭಾರತದಲ್ಲಿ ತಲೆಯೆತ್ತಲಿದೆ ಮೊದಲ ಬೃಹತ್ ಡೇಟಾ ಸೆಂಟರ್!

‘ಇರಾನ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ಸಾಧಿಸಿದೆ’: ಹಾರ್ಮುಜ್ ಜಲಸಂಧಿ ಬಿಕ್ಕಟ್ಟಿನ ನಡುವೆ ಟ್ರಂಪ್ ಮತ್ತು ರಕ್ಷಣಾ ಕಾರ್ಯದರ್ಶಿ ಅಧಿಕೃತ ಘೋಷಣೆ!

State News
KARNATAKA

ಸುಶಿಕ್ಷಿತ ಯುವಶಕ್ತಿಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ: ಸಚಿವ ಕೆ.ಜೆ.ಜಾರ್ಜ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ…

BREAKING: ಬೆಂಗಳೂರಿನಲ್ಲಿ ಬೃಹತ್ GST ವಂಚನೆ ಜಾಲ ಪತ್ತೆ: ₹410 ಕೋಟಿ ಐಟಿಸಿ ಹಗರಣದ ಕಿಂಗ್‌ಪಿನ್ ಬಂಧನ

ಬೆಂಗಳೂರಲ್ಲಿ 23 ಲಕ್ಷಕ್ಕೂ ಹೆಚ್ಚು ಖಾತಾ ಬಿಡುಗಡೆ ದೇಶದಲ್ಲೇ ದಾಖಲೆ: ಡಿಸಿಎಂ ಡಿ ಕೆ ಶಿವಕುಮಾರ್

BIG BREAKING: ರಾಜ್ಯ ಸರ್ಕಾರದಿಂದ ‘ಶಾಲಾ-ಕಾಲೇಜು’ಗಳಲ್ಲಿ ‘ಹಿಜಾಬ್ ನಿಷೇಧ’ ಆದೇಶ ವಾಪಾಸ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.