ಬೆಂಗಳೂರು: ಪ್ರಸಕ್ತ ಸಾಲಿನಂದ ರಾಜ್ಯ ಪಠ್ಯಕ್ರಮದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ( SSLC Students ) ಅರ್ಧ ವಾರ್ಷಿಕ ಪರೀಕ್ಷೆಗೂ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ನೀಡುವ ಏಕರೂಪದ ಪ್ರಶ್ನೆ ಪತ್ರಿಕೆಗೆ ಉತ್ತರ ಬರೆಯಬೇಕಿದೆ. ಈ ಮೂಲಕ ಎಸ್ ಎಸ್ ಎಲ್ ಸಿ ಪರೀಕ್ಷೆಗೂ ( SSLC Exam ) ಏಕರೂಪದ ಪ್ರಶ್ನೆ ಪತ್ರಿಕೆಯನ್ನು ಮಂಡಳಿ ನೀಡುತ್ತಿದೆ.
ಕಳೆದ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ಶಾಲಾ ಹಂತದಲ್ಲೇ ಪ್ರಶ್ನೆ ಪತ್ರಿಕೆ ತಯಾರಿಸಿ, ಅರ್ಧ ವಾರ್ಷಿಕ ಪರೀಕ್ಷೆ ನಡೆಸಲು ಸೂಚಿಸಲಾಗಿತ್ತು. ಆದರೇ ಈ ವರ್ಷ ಅದಕ್ಕೆ ಬ್ರೇಕ್ ಹಾಕಿದೆ. ಈ ಸಾಲಿನಿಂದ ಸರ್ಕಾರದ ನಿರ್ದೇಶನದಂತೆ ಅರ್ಧ ವಾರ್ಷಿಕ ಪರೀಕ್ಷೆಗೂ ರಾಜ್ಯಾಧ್ಯಂತ ಏಕರೂಪದ ಪ್ರಶ್ನೆಪತ್ರಿಕೆ ನೀಡಲು ಮಂಡಳಿ ತೀರ್ಮಾನಿಸಿದೆ.
ಈಗಾಗಲೇ ಪ್ರಕಟಿಸಿರುವ ವೇಳಾಪಟ್ಟಿಯಂತೆ ಸೆಪ್ಟೆಂಬರ್.24ರಿಂದ ಅಕ್ಟೋಬರ್ 1ರವರೆಗೆ ಎಸ್ ಎಸ್ ಎಲ್ ಸಿ ಅರ್ಧವಾರ್ಷಿಕ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗೆ ವಿದ್ಯಾರ್ಥಿಗಳಿಗೆ ಮಂಡಳಿಯಿಂದಲೇ ಏಕರೂಪದ ಪ್ರಶ್ನೆ ಪತ್ರಿಕೆಯನ್ನು ನೀಡಲಾಗುತ್ತಿದೆ.
ಅಂದಹಾಗೇ ಕಳೆದ ಸಾಲಿನಿಂದ ಪೂರ್ವ ಸಿದ್ಧತಾ ಪರೀಕ್ಷೆಗೆ ಮಂಡಳಿಯೇ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ ನೀಡಿತ್ತು. ಈ ವರ್ಷ ಸರ್ಕಾರದ ನಿರ್ದೇಶನದಂತೆ ಅದನ್ನು ಅರ್ಧ ವಾರ್ಷಿಕ ಪರೀಕ್ಷೆಗೂ ವಿಸ್ತರಿಸಲಾಗಿದೆ ಎಂಬುದಾಗಿ ಮಂಡಳಿಯ ಅಧ್ಯಕ್ಷೆ ಮಂಜುಶ್ರೀ ತಿಳಿಸಿದ್ದಾರೆ.
ಬೆಂಗಳೂರು ಜನತೆ ಗಮನಕ್ಕೆ : ಇಂದು, ನಾಳೆ ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut