ನವದೆಹಲಿ:ದೇಶದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರ ಯೋಜಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಮುಂದಿನ ಮೂರು ವರ್ಷಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರ ಯೋಜಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
“ನಿರ್ದಿಷ್ಟವಾಗಿ, 2025- 26ರ ಆರ್ಥಿಕ ವರ್ಷದಲ್ಲಿ ಇಂತಹ 200 ಕೇಂದ್ರಗಳನ್ನು ಸ್ಥಾಪಿಸುವ ನಿರೀಕ್ಷೆಯಿದೆ. ಈ ಕ್ರಮವು ದೇಶಾದ್ಯಂತ ಕ್ಯಾನ್ಸರ್ ಚಿಕಿತ್ಸೆಯನ್ನು ಸುಧಾರಿಸುವ ಗುರಿಯನ್ನು ಹೊಂದಿದೆ” ಎಂದು ಅವರು ಹೇಳಿದ್ದಾರೆ. ಜನರಿಗೆ ಆರೋಗ್ಯ ಭಾಗ್ಯ ಕರುಣಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಇದೀಗ ಪ್ರತಿ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಆರಂಭಿಸುವುದಾಗಿ ಘೋಷಣೆ ಮಾಡಿದೆ.ಇದು ಎಲ್ಲಾ ವರ್ಗದ ಜನರಿಗೂ ಅನುಕೂಲ ಮಾಡಿಕೊಡಲಿದೆ