ನವದೆಹಲಿ: 2024 ರ ಮಧ್ಯಂತರ ಬಜೆಟ್ ‘ವಿಕ್ಷಿತ್ ಭಾರತ್ ಅಡಿಪಾಯವನ್ನು ಬಲಪಡಿಸುವ ಭರವಸೆ’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆೆ.
ಮುಂದಿನ ಐದು ವರ್ಷಗಳಲ್ಲಿ 2 ಕೋಟಿ ಬಡವರಿಗೆ ಮನೆ ನಿರ್ಮಿಸಿಕೊಡುತ್ತೇವೆ ಎಂದು ನಿರ್ಮಲಾ ಸೀತಾರಾಮನ್ ಘೋಷಿಸಿದರು.
ಹಾಗು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದರು. ಇಂದು ಬಜೆಟ್ ಮಂಡಿಸಿ ಭಾಷಣದಲ್ಲಿ ಅವರು ಈ ಮಹತ್ವದ ಘೋಷಣೆ ಮಾಡಿದರು.
ದೇಶದಲ್ಲಿ ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ತೆರೆಯಲು ಒತ್ತು:
ದೇಶದಲ್ಲಿ ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ತೆರೆಯಲು ಒತ್ತು ನೀಡಲಾಗುವುದು, ಅಂಗನವಾಡಿ ಕೇಂದ್ರವನ್ನು ಮೇಲ್ದರ್ಜೆಗೇರಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.