ನವದೆಹಲಿ: ದೇಶದ ಕೆಲ ಭಾಗದ ಹಳ್ಳಿಗಳಲ್ಲಿ ನೆಟ್ವರ್ಕ್ ಸಮಸ್ಯೆ ಇದೆ. 4ಜಿ ನೆಟ್ವರ್ಕ್ ಅಂತೂ ಕನಸಿನ ಮಾತು. ಇದೀಗ ಈ ಎಲ್ಲಾ ಸಮಸ್ಯೆಗೆ ಪರಿಹಾರ ರೂಪಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ದೇಶದ ಎಲ್ಲಾ ಹಳ್ಳಿಗಳಲ್ಲಿಯೂ 4ಜಿ ಮೊಬೈಲ್ ಸೇವೆಗಳ ಲಭ್ಯಕ್ಕೆ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

BREAKING NEWS: ಉತ್ತರ ಪ್ರದೇಶದ ನೋಯ್ಡಾದಲ್ಲಿ ಮಂಕಿಪಾಕ್ಸ್ ಪ್ರಕರಣ ಪತ್ತೆ – ಆರೋಗ್ಯ ಇಲಾಖೆ | Monkeypox Case

ಈ ಕುರಿತಂತೆ ಮಾಹಿತಿ ನೀಡಿದಂತ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, 26,316 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಯೂನಿವರ್ಸಲ್ ಸರ್ವೀಸ್ ಆಬ್ಲಿಗೇಷನ್ ಫಂಡ್ ಮೂಲಕ ದೇಶದ ಎಲ್ಲ ಹಳ್ಳಿಗಳಲ್ಲಿ 4ಜಿ ಮೊಬೈಲ್ ಸೇವೆಗಳನ್ನು ಪೂರೈಸುವ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ. ಈ ಮೂಲಕ ದೇಶದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ ನೀಡಿದ್ದಾರೆ.

Share.
Exit mobile version