ಬಳ್ಳಾರಿ: ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆ ರಣತಂತ್ರಕ್ಕಾಗಿ ಫೆ.21ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ(Union Home Minister Amit Shah )ಬಳ್ಳಾರಿ(Bellary)ಗೆ ಆಗಮಿಸಲಿದ್ದಾರೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು (Transport Minister B. Sriramulu) ಹೇಳಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆ ರಣತಂತ್ರ ರೂಪಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ನಿರಂತರವಾಗಿ ರಾಜ್ಯಕ್ಕೆ ಭೇಟಿಯಾಗುತ್ತಿದ್ದಾರೆ, ಈ ಮೂಲಕ ಬಿಜೆಪಿ ಪಕ್ಷವನ್ನು ಸಂಘಟಿಸುವ ಮೂಲಕ ರಾಜ್ಯದಲ್ಲಿ ಬಿಜೆಪಿ ಮತ್ತೂಮ್ಮೆ ಅಧಿಕಾರಕ್ಕೆ ತರುವ ಪ್ರಯತ್ನ ನಡೆಸಿದ್ದಾರೆ ಈ ನಿಟ್ಟಿನಲ್ಲಿ ಫೆ.21ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಳ್ಳಾರಿಗೆ ಆಗಮಿಸಲಿದ್ದಾರೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಮಾಹಿತಿ ನೀಡಿದ್ದಾರೆ.