ಬೆಳಗಾವಿ : ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ಬಿಜೆಪಿ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾತನಾಡಿ, ಇತ್ತೀಚೆಗೆ ಹುಬ್ಬಳ್ಳಿಯ ಬಿವಿ ಬಿ ಕಾಲೇಜು ಆವರಣದಲ್ಲಿ ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು ಈ ಪ್ರಕರಣವನ್ನು ಸಿಬಿಐ ವಹಿಸಿ ಎಂದು ಅಗ್ರಹ ಪಡಿಸಿದರು.
ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ಬಿಜೆಪಿ ಸಮಾವೇಶ ನಡೆಯುತ್ತಿದ್ದು ಈ ಒಂದು ಸಮಾವೇಶದಲ್ಲಿ ಭಾಗಿಯಾಗಿರುವ ಕೇಂದ್ರ ಸಚಿವ ಅಮಿತ್ ಶಾ ಅವರು ಮಾತನಾಡಿ, ವೈಯಕ್ತಿಕ ವಿಚಾರಕ್ಕೆ ವಿದ್ಯಾರ್ಥಿನಿ ನೇಹಾ ಕೊಲೆ ನಡೆದಿಲ್ಲ ಮತಾಂತರ ಆಗಲು ನೇಹಾ ಹಿರೇಮಠ ಒಪ್ಪದಿದ್ದಕ್ಕೆ ಹತ್ಯೆಯಾಗಿದೆ ಎಂದು ಅವರು ತಿಳಿಸಿದರು.
ನೇಹಾ ಕೊಲೆಗೆ ನ್ಯಾಯ ಸಿಗಬೇಕು ಅಂದರೆ ಪ್ರಕರಣವನ್ನು ಸಿಬಿಐಗೆ ವಹಿಸಲಿ.ಅನ್ಯಾಯ ಮಾಡಿದವರಿಗೆ ತಲೆಕೆಳಗೆ ಮಾಡಿ ತಕ್ಕ ಶಾಸ್ತಿ ಮಾಡುತ್ತೇವೆ ಎಂದು ಬಿಜೆಪಿ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿಕೆ ನೀಡಿದರು.