ಮಂಡ್ಯ: ಕೇಂದ್ರ ಗೃಹ ಸಚಿವ ಅಮಿತ್ ಶಾ ( Union Home Minister Amith Shash ) ಅವರು ಇಂದು ಮತ್ತು ನಾಳೆ ರಾಜ್ಯದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಲ್ಲದೇ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ಗುರಿಯೊಂದಿಗೆ, ಇಂದು ಜೆಡಿಎಸ್ ಭದ್ರಕೋಟೆ ಎಂದೇ ಬಿಂಬಿದ ಮಂಡ್ಯದಿಂದ ತಮ್ಮ ಪ್ರವಾಸ ಪ್ರಾರಂಭಿಸಲಿದ್ದಾರೆ.
ಇಂದು ಮಂಡ್ಯದಲ್ಲಿ ಮೆಗಾ ಡೈರಿ ಉದ್ಘಾಟಿಸಿದ ಬಳಿಕ, ಅಮಿತ್ ಶಾ ಅವರು, ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು, ಮಂಡ್ಯ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದಷ್ಟೇ ಅಲ್ಲದೇ ಇದಕ್ಕೂ ಮುನ್ನಾ ನಡೆಯುವಂತ Rallyಯಲ್ಲಿಯೂ ಅವರು ಭಾಗಿಯಾಗಲಿದ್ದಾರೆ. ಈ ವೇಳೆ ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆಯಿದೆ.