ನವದೆಹಲಿ : ರಾಜ್ಯದ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಇಂದು ನವ ದೆಹಲಿಯಲ್ಲಿ ಕೇಂದ್ರ ಜಲ ಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತರ ವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಕೇಂದ್ರದಲ್ಲಿ ಬಾಕಿ ಇರುವ ಅನುಮೋದನೆಗಳನ್ನು ದೊರಕಿಸಿ ಕೊಡುವಂತೆ ವಿನಂತಿಸಿದರು. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ನಿವಾಸದಲ್ಲಿ ಇಂದು ಸಂಜೆ ಈ ಮಹತ್ವದ ಸಭೆ ನಡೆಯಿತು.
BREAKING NEWS : ‘ಮುರುಘಾ ಶ್ರೀ’ ಪೋಕ್ಸೋ ಕೇಸ್ : ಒಡನಾಡಿ ಸಂಸ್ಥೆಯ ನಾಲ್ವರು ಸಿಬ್ಬಂದಿ ಪೊಲೀಸ್ ವಶಕ್ಕೆ , ವಿಚಾರಣೆ
ರಾಜ್ಯದ ಪ್ರಮುಖ ಯೋಜನೆಗಳಾದ ಮಹದಾಯಿ, ಮೇಕೆದಾಟು, ಕೃಷ್ಣ ಮೇಲ್ದಂಡೆ ಭದ್ರ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಅನುಮೋದನೆ ನೀಡುವಂತೆ ಕೋರಲಾಯಿತು.
ಭದ್ರ ಮೇಲ್ದಂಡೆ ಯೋಜನೆಯ ಪ್ರಸ್ತಾವನೆ ಹಂತದಲ್ಲಿದ್ದು ಈ ಯೋಜನೆಗೆ ಮುಂದಿನ ಕೇಂದ್ರ ಸಚಿವ ಸಂಪುಟದ ಸಭೆಯಲ್ಲಿ ಅನುಮೋದನೆ ದೊರೆಯುವ ವಿಶ್ವಾಸವಿದೆಯೆಂದು ಮಾನ್ಯ ಜಲ ಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ್ ರವರು ವ್ಯಕ್ತಪಡಿಸಿದ್ದಾರೆ. ಮಹದಾಯಿ ಯೋಜನೆಯ ಅನುಮೋದನೆ ಶೀಘ್ರದಲ್ಲಿಯೇ ದೊರಕುವ ನಿರೀಕ್ಷೆ ಇದೆ ಎಂದು ಸಚಿವರು ತಿಳಿಸಿದ್ದಾರೆ.