ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹಿರಿಯ ಸಹೋದರಿ ರಾಜುಬೆನ್ ಸೋಮವಾರ ಮುಂಬೈನ ಆಸ್ಪತ್ರೆಯಲ್ಲಿ ನಿಧನರಾದರು. ಕೆಲವು ತಿಂಗಳ ಹಿಂದೆ ಶ್ವಾಸಕೋಶ ಕಸಿ ಪ್ರಕ್ರಿಯೆಯ ನಂತರ ರಾಜುಬೆನ್ ಮುಂಬೈ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದರು ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಈ ಬೆಳವಣಿಗೆಯ ನಂತರ, ಶಾ ಗುಜರಾತ್ನಲ್ಲಿ ನಡೆಯಬೇಕಿದ್ದ ಎರಡು ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ತಮ್ಮ ಹಿರಿಯ ಸಹೋದರಿಯ ನಿಧನದ ನಂತರ, ಶಾ ತಮ್ಮ ಎಲ್ಲಾ ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.
ಅಮಿತ್ ಶಾ ಗುಜರಾತ್ನಲ್ಲಿ ಎರಡು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕಿತ್ತು – ಒಂದು ಬನಸ್ಕಾಂತ ಜಿಲ್ಲೆಯ ದೇವದರ್ನ ಬನಾಸ್ ಡೈರಿಯಲ್ಲಿ ಮತ್ತು ಇನ್ನೊಂದು ಗಾಂಧಿನಗರದ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದಲ್ಲಿ ಕಾರ್ಯಕ್ರಮ ಇಂದು ಆಯೋಜಿಸಲಾಗಿತ್ತು.