ನವದೆಹಲಿ: ನಾಡಿನ ಹಿರಿಯ ರಾಜಕಾರಣಿ, ಮಾಜಿ ಮಂತ್ರಿಗಳು, ಉದ್ಯಮಿಯೂ ಆಗಿದ್ದ ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಕಂಬನಿ ಮಿಡಿದಿದ್ದಾರೆ.
ಈ ಬಗ್ಗೆ ಶೋಕ ಸಂದೇಶ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ನಾಡಿನ ಹಿರಿಯ ರಾಜಕಾರಣಿಗಳು, ಮಾಜಿ ಮಂತ್ರಿಗಳು, ಉದ್ಯಮಿಗಳು ಆಗಿದ್ದ ಸರಳ ಸಜ್ಜನಿಕೆಯ ನಾಯಕರಾದ ಶ್ರೀ ಶ್ಯಾಮನೂರು ಶಿವಶಂಕರಪ್ಪನವರ ನಿಧನದ ವಾರ್ತೆ ಕೇಳಿ ಬಹಳ ದುಃಖವಾಯಿತು. ವೈಯಕ್ತಿಕವಾಗಿ ನಾನು ಬಹಳ ಗೌರವಿಸುತ್ತಿದ್ದ ನಾಯಕರು ಅವರಾಗಿದ್ದರು ಎಂದು ತಿಳಿಸಿದ್ದಾರೆ.
ರಾಜಕಾರಣ ಮಾತ್ರವಲ್ಲದೆ ಶಿಕ್ಷಣ, ಉದ್ಯಮ, ಸಮಾಜಸೇವೆ ಕ್ಷೇತ್ರಗಳಲ್ಲಿಯೂ ಯಶಸ್ಸು ಗಳಿಸಿ ಮಾದರಿ ವ್ಯಕ್ತಿತ್ವದ ಸಾಧಕರಾಗಿದ್ದರು. ನೇರ ನಡೆನುಡಿಯ ಅವರು ಸಚಿವರಾಗಿಯೂ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ತಮ್ಮ ಇಡೀ ಜೀವನವನ್ನು ಕಾಂಗ್ರೆಸ್ ಪಕ್ಷಕ್ಕೆ ಮೀಸಲಿಟ್ಟು ದುಡಿದರು. ಅವರ ಅಗಲಿಕೆ ನಾಡಿಗೆ ಬಹುದೊಡ್ಡ ನಷ್ಟವಾಗಿದೆ ಎಂದು ಕೇಂದ್ರ ಸಚಿವರು ದುಃಖ ವ್ಯಕ್ತಪಡಿಸಿದ್ದಾರೆ.
ಶ್ರೀಯುತರ ಆತ್ಮಕ್ಕೆ ಸದ್ಗತಿ ಸಿಗಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಪರಮ ಶಿವನು ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ, ಹಿತೈಷಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ಹೇಳಿದ್ದಾರೆ.
ಶ್ಯಾಮನೂರ ಪುತ್ರರಾದ ಸಚಿವ ಮಲ್ಲಿಕಾರ್ಜುನ್ ಅವರಿಗೆ ಸಚಿವರ ಕರೆ:
ಶ್ಯಾಮನೂರು ಶಿವಶಂಕರಪ್ಪ ಅವರ ನಿಧನದ ವಾರ್ತೆ ಗೊತ್ತಾದ ಕೂಡಲೇ ಶ್ಯಾಮನೂರರ ಪುತ್ರ ಹಾಗೂ ರಾಜ್ಯದ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ದೂರವಾಣಿ ಕರೆ ಮಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು; ಹಿರಿಯರಾದ ಶ್ಯಾಮನೂರರ ನಿಧನಕ್ಕೆ ಅತೀವ ನೋವು ವ್ಯಕ್ತಪಡಿಸಿ, ಸಾಂತ್ವನ ಹೇಳಿದರು.
ಅಖಿಲ ಭಾರತೀಯ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ ಮುಖಂಡರು, ಮಾಜಿ ಸಚಿವರು ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರಾಗಿದ್ದ ಶ್ರೀ ಶಾಮನೂರು ಶಿವಶಂಕರಪ್ಪ ಅವರು ನಿಧನರಾದ ವಿಷಯ ತಿಳಿದು ಮನಸ್ಸಿಗೆ ಅಪಾರ ನೋವುಂಟಾಯಿತು.
1/2 pic.twitter.com/K3cKdFPAfA— H D Devegowda (@H_D_Devegowda) December 14, 2025
BIG BREAKING: ಕಾಂಗ್ರೆಸ್ ಹಿರಿಯ ನಾಯಕ ‘ಶಾಮನೂರು ಶಿವಶಂಕರಪ್ಪ’ ವಿಧಿವಶ | Shamanur Shivashankarappa
‘ಡಿಜಿಟಲ್ ಅರೆಸ್ಟ್’ ವಂಚನೆ: 1 ಕೋಟಿ ರೂ. ಕಳೆದುಕೊಂಡ 82 ವರ್ಷದ ವ್ಯಕ್ತಿ | Digital arrest scam







