Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಮುಚ್ಚಿದ ಕೋಣೆಯಲ್ಲಿ `ಅಗರಬತ್ತಿ’ ಹಚ್ಚುವವರೇ ಎಚ್ಚರ : ಇದು ಮಕ್ಕಳು, ವೃದ್ಧರ ಆರೋಗ್ಯಕ್ಕೆ ಅಪಾಯಕಾರಿ!

16/03/2026 8:00 AM

SHOCKING : ಆಂಧ್ರಪ್ರದೇಶದಲ್ಲಿ ಘೋರ ದುರಂತ: ಬೈಕ್ ಹೊಗೆ ಸೇವಿಸಿ ಒಂದೇ ಕುಟುಂಬದ ನಾಲ್ವರು ಸಾವು !

16/03/2026 7:53 AM

ಗಮನಿಸಿ : ಬಿಪಿ, ಶುಗರ್ ಹಾಗೂ ಲಿವರ್ ಸಮಸ್ಯೆಗಳಿಗೆ ರಾಮಬಾಣ ಈ ಬಳ್ಳಿ!

16/03/2026 7:46 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಂಡ್ಯ ಜಿಲ್ಲೆ ಜೆಡಿಎಸ್ ಮುಖಂಡರ ಸಭೆ ನಡೆಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
KARNATAKA

ಮಂಡ್ಯ ಜಿಲ್ಲೆ ಜೆಡಿಎಸ್ ಮುಖಂಡರ ಸಭೆ ನಡೆಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

By kannadanewsnow0931/10/2025 6:58 PM

ಬೆಂಗಳೂರು: ಕೇಂದ್ರ ಸಚಿವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಹೆಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯ ಜಿಲ್ಲೆಯ ಪಕ್ಷದ ಮುಖಂಡರ ಸಭೆ ನಡೆಸಿ ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ದಿಸೆಯಲ್ಲಿ ಮಹತ್ವದ ಸಮಾಲೋಚನೆ ನಡೆಸಿದರು.

ಬಿಡದಿಯ ತಮ್ಮ ತೋಟದಲ್ಲಿ ಶುಕ್ರವಾರದಂದು ರಾಜ್ಯಾಧ್ಯಕ್ಷರು ಕರೆದಿದ್ದ ಈ ಸಭೆಯಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಮಂತ್ರಿಗಳಾದ ಡಿ.ಸಿ. ತಮ್ಮಣ್ಣ, ಸಿ.ಎಸ್. ಪುಟ್ಟರಾಜು, ಮಾಜಿ ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಸುರೇಶ್ ಗೌಡ, ಡಾ.ಕೆ. ಅನ್ನದಾನಿ, ಶಾಸಕ ಮಂಜುನಾಥ್, ಜಿಲ್ಲಾಧ್ಯಕ್ಷ ರಮೇಶ್, ಮುಖಂಡ ರಾಮಚಂದ್ರ ಪಾಲ್ಗೊಂಡಿದ್ದರು.

ಜಿಲ್ಲೆಯ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಮುಖಂಡರ ಜತೆ ಕೂಲಂಕಷವಾಗಿ ಚರ್ಚೆ ನಡೆಸಿದ ಸಚಿವರು, ಪಕ್ಷ ಸಂಘಟನೆಯಲ್ಲಿ ಎಲ್ಲರೂ ಗಂಭೀರವಾಗಿ ತೊಡಗಿಸಿಕೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

ಅಲ್ಲದೆ, ಡಿಸಿಸಿ ಬ್ಯಾಂಕ್ ಚುನಾವಣೆಯ ಬಗ್ಗೆ ಪ್ರಸ್ತಾಪಿಸಿದ ಸಚಿವರು, ಪಕ್ಷದ ಸಂಘಟನೆ ಬಗ್ಗೆ ಅಲಕ್ಷ್ಯ ಬೇಡ. ಕಳೆದ ಲೋಕಸಭೆ ಚುನಾವಣೆಯಲ್ಲಿ ದೊಡ್ಡ ಮಟ್ಟದ ಬಹುಮತದಲ್ಲಿ ಜಿಲ್ಲೆಯ ಜನತೆ ನಮ್ಮನ್ನು ಆಶೀರ್ವಾದ ಮಾಡಿದ್ದಾರೆ. ಅಧಿಕಾರವಿರಲಿ, ಇಲ್ಲದಿರಲಿ ಜನರ ಜತೆ ನೀವು ಸದಾ ಇರಬೇಕು. ಅವರ ನಿರೀಕ್ಷೆಯನ್ನು ಹುಸಿ ಮಾಡಬಾರದು ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಪ್ರತೀ ಮನೆ ಮತ್ತು ಗ್ರಾಮ ಗ್ರಾಮದಲ್ಲೂ ಪಕ್ಷ ಇರಬೇಕು:

ಈಗಾಗಲೇ ಮಂಡ್ಯ ಜಿಲ್ಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಸಂಘಟನಾ ಪ್ರವಾಸ ಮುಗಿದಿದೆ. ಅದಕ್ಕೆ ಉತ್ತಮ ಸ್ಪಂದನೆ ಸಿಕ್ಕಿದೆ. ಆ ನಂತರ ನೀವುಗಳು ಹೆಚ್ಚಿನ ಪ್ರಮಾಣದಲ್ಲಿ ಸದಸ್ಯತ್ವ ನೋಂದಣಿ ಮಾಡಿಸಬೇಕು. ಗ್ರಾಮ ಗ್ರಾಮದಲ್ಲಿಯೂ, ಮನೆ ಮನೆಯಲ್ಲಿಯೂ ಪಕ್ಷದ ಕಾರ್ಯಕರ್ತರು ಇರಬೇಕು ಎಂದು ಕುಮಾರಸ್ವಾಮಿ ಅವರು ಒತ್ತಿ ಹೇಳಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ನಮಗೆ ಉತ್ತಮ ಫಲಿತಾಂಶ ಬರಲಿಲ್ಲ. ಆದರೂ ನಾವು ಜನರ ಜತೆಯೇ ಇದ್ದೆವು. ಪರಿಣಾಮವಾಗಿ ಲೋಕಸಭೆ ಚುನಾವಣೆಯಲ್ಲಿ ಜನ ನಮ್ಮ ಕೈ ಹಿಡಿದರು. ಆ ಜನರ ಆಶೀರ್ವಾದದಿಂದ ನಾನು ಸಂಸತ್ ಸದಸ್ಯನಾಗಿ ಆಯ್ಕೆಯಾಗಿ ಕೇಂದ್ರದಲ್ಲಿ ಮಂತ್ರಿಯೂ ಆಗಿದ್ದೇನೆ. ಜಿಲ್ಲೆಯ ಜನರ ಜತೆ ನನಗೆ ರಾಜಕಾರಣಕ್ಕೂ ಮೀರಿದ ಭಾವನಾತ್ಮಕ ಸಂಬಂಧವಿದೆ. ಅದಕ್ಕೆ ಚ್ಯುತಿ ಬರಬಾರದಂತೆ ನೀವು ನಡೆದುಕೊಳ್ಳಬೇಕು. ಆ ಜನರ ಋಣ ತೀರಿಸುವ ಕೆಲಸವನ್ನು ನಾನು ಮಾಡಿಯೇ ಮಾಡುತ್ತೇನೆ. ಹೀಗಾಗಿ ನೀವೆಲ್ಲರೂ ಒಗ್ಗಟ್ಟಾಗಿ, ಪರಸ್ಪರ ಸಹಮತದಿಂದ ಪಕ್ಷದ ಕೆಲಸ ಮಾಡಬೇಕು ಎಂದು ಸಚಿವರು ತಾಕೀತು ಮಾಡಿದರು.

ಪಕ್ಷವನ್ನು ಯಾರೂ ಲಘುವಾಗಿ ತೆಗೆದುಕೊಳ್ಳಬೇಡಿ. ಪಕ್ಷವಿದ್ದರಷ್ಟೇ ನಾವು ಎಂಬುದನ್ನು ಮರೆಯಬಾರದು. ಸಂಘಟನೆಯಲ್ಲಿ ಬದ್ಧತೆ, ಗಂಭೀರವಾಗಿ ತೊಡಗಿಸಿಕೊಳ್ಳಿ. ಜನಪರ ಕಾರ್ಯಕ್ರಮಗಳನ್ನು ರೂಪಿಸಿ. ರಾಜ್ಯ ಸರಕಾರದ ದುರಾಡಳಿತದಿಂದ ಜನರು ರೋಸಿ ಹೋಗಿದ್ದಾರೆ. ಜಿಲ್ಲೆಯ ರೈತರು ಇನ್ನಿಲ್ಲದ ಸಂಕಷ್ಟದಲ್ಲಿದ್ದಾರೆ. ಮುಖ್ಯವಾಗಿ ಕಬ್ಬು ಬೆಳೆಗಾರರು ಸಕ್ಕರೆ ಕಾರ್ಖಾನೆಗಳಲ್ಲಿ ನಿಗದಿತ ಪ್ರಮಾಣದಲ್ಲಿ ಕಬ್ಬು ಅರಿಯದ ಕಾರಣ ಸಮಸ್ಯೆಯಲ್ಲಿ ಸಿಲುಕಿದ್ದಾರೆ. ನಿಮ್ಮ ಜವಾಬ್ದಾರಿ ಹೆಚ್ಚಿದೆ. ಸದಾ ಜನರ ಜತೆ ನಿಂತು ದುಡಿಮೆ ಮಾಡಿ ಎಂದು ಅವರು ಸೂಚಿಸಿದರು.

ವೈಮಸು ಬಿಟ್ಟು ಕೆಲಸ ಮಾಡಿ:

ಸಣ್ಣಪುಟ್ಟ ವೈಮಸು ಇದ್ದರೆ ಮೊದಲು ಬಿಡಿ. ಅದರಿಂದ ಪಕ್ಷದ ಬೆಳವಣಿಗೆಗೆ ಧಕ್ಕೆ ಆಗುತ್ತದೆ. ಯಾರೂ ಪಕ್ಷಕ್ಕೆ ಹಾನಿ ಆಗುವ ರೀತಿ ನಡೆದುಕೊಳ್ಳಬಾರದು. ಏನೇ ಸಮಸ್ಯೆ ಇದ್ದರೂ ಸೌಹಾರ್ದಯುತವಾಗಿ ಸಭೆ ನಡೆಸಿ ಬಗೆಹರಿಸಿಕೊಳ್ಳಿ. ಪಕ್ಷದ ಸಂಘಟನೆ ಹಾಗೂ ಸಾಂಸ್ಥಿಕ ನೇಮಕಗಳಲ್ಲಿ ಗುರುತರ ಬದಲಾವಣೆಗಳು ಆಗಲಿವೆ. ಮುಂದಿನ ದಿನಗಳಲ್ಲಿ ಪಕ್ಷದ ವರ್ಚಸ್ಸು, ಬೆಳವಣಿಗೆ ದೃಷ್ಟಿಯಿಂದ ಕೆಲಸ ಮಾಡಬೇಕು. ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ. ಆಂತರಿಕ ಕಚ್ಚಾಟ, ಆಡಳಿತ ವಿರೋಧಿ ಅಲೆ ಸರ್ಕಾರವನ್ನು ಬಾಧಿಸುತ್ತಿದೆ. ನೀವೆಲ್ಲರೂ ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಖಂಡತುಂಡವಾಗಿ ಸಚಿವರು ಹೇಳಿದರು.

ಆಭರಣ ಪ್ರಿಯರಿಗೆ ಶಾಕ್: ಮತ್ತೆ ಚಿನ್ನ ಬರೋಬ್ಬರಿ 2,200 ರೂ ಏರಿಕೆ | Gold Price Today

‘ಗ್ರಾಮ ಪಂಚಾಯ್ತಿ ಚುನಾವಣೆ’ಗೆ ‘ನಾಮಪತ್ರ’ದೊಂದಿಗೆ ಸಲ್ಲಿಸಲು ಈ ‘ದಾಖಲೆ’ಗಳು ಕಡ್ಡಾಯ

Share. Facebook Twitter LinkedIn WhatsApp Email

Related Posts

ALERT : ಮುಚ್ಚಿದ ಕೋಣೆಯಲ್ಲಿ `ಅಗರಬತ್ತಿ’ ಹಚ್ಚುವವರೇ ಎಚ್ಚರ : ಇದು ಮಕ್ಕಳು, ವೃದ್ಧರ ಆರೋಗ್ಯಕ್ಕೆ ಅಪಾಯಕಾರಿ!

16/03/2026 8:00 AM2 Mins Read

ಗಮನಿಸಿ : ಬಿಪಿ, ಶುಗರ್ ಹಾಗೂ ಲಿವರ್ ಸಮಸ್ಯೆಗಳಿಗೆ ರಾಮಬಾಣ ಈ ಬಳ್ಳಿ!

16/03/2026 7:46 AM1 Min Read

ಬ್ಯಾಂಕ್ ಗ್ರಾಹಕರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ನಿಮಗೆ ಸಿಗಲ್ಲ ಹಣ !

16/03/2026 7:40 AM2 Mins Read
Recent News

ALERT : ಮುಚ್ಚಿದ ಕೋಣೆಯಲ್ಲಿ `ಅಗರಬತ್ತಿ’ ಹಚ್ಚುವವರೇ ಎಚ್ಚರ : ಇದು ಮಕ್ಕಳು, ವೃದ್ಧರ ಆರೋಗ್ಯಕ್ಕೆ ಅಪಾಯಕಾರಿ!

16/03/2026 8:00 AM

SHOCKING : ಆಂಧ್ರಪ್ರದೇಶದಲ್ಲಿ ಘೋರ ದುರಂತ: ಬೈಕ್ ಹೊಗೆ ಸೇವಿಸಿ ಒಂದೇ ಕುಟುಂಬದ ನಾಲ್ವರು ಸಾವು !

16/03/2026 7:53 AM

ಗಮನಿಸಿ : ಬಿಪಿ, ಶುಗರ್ ಹಾಗೂ ಲಿವರ್ ಸಮಸ್ಯೆಗಳಿಗೆ ರಾಮಬಾಣ ಈ ಬಳ್ಳಿ!

16/03/2026 7:46 AM

ಬ್ಯಾಂಕ್ ಗ್ರಾಹಕರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ನಿಮಗೆ ಸಿಗಲ್ಲ ಹಣ !

16/03/2026 7:40 AM
State News
KARNATAKA

ALERT : ಮುಚ್ಚಿದ ಕೋಣೆಯಲ್ಲಿ `ಅಗರಬತ್ತಿ’ ಹಚ್ಚುವವರೇ ಎಚ್ಚರ : ಇದು ಮಕ್ಕಳು, ವೃದ್ಧರ ಆರೋಗ್ಯಕ್ಕೆ ಅಪಾಯಕಾರಿ!

By kannadanewsnow5716/03/2026 8:00 AM KARNATAKA 2 Mins Read

ಭಾರತೀಯ ಸಂಪ್ರದಾಯದಲ್ಲಿ ಪೂಜೆ ಮತ್ತು ಶುಭ ಕಾರ್ಯಗಳ ಸಂದರ್ಭದಲ್ಲಿ ಅಗರಬತ್ತಿ ಅಥವಾ ಧೂಪವನ್ನು ಹಚ್ಚುವುದು ಸಾಮಾನ್ಯ. ಆದರೆ, ಗಾಳಿಯ ಸಂಚಾರವಿಲ್ಲದ…

ಗಮನಿಸಿ : ಬಿಪಿ, ಶುಗರ್ ಹಾಗೂ ಲಿವರ್ ಸಮಸ್ಯೆಗಳಿಗೆ ರಾಮಬಾಣ ಈ ಬಳ್ಳಿ!

16/03/2026 7:46 AM

ಬ್ಯಾಂಕ್ ಗ್ರಾಹಕರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ನಿಮಗೆ ಸಿಗಲ್ಲ ಹಣ !

16/03/2026 7:40 AM

ಈ 5 ಆಹಾರಗಳನ್ನು ಕರಿಬೇವಿನ ಎಲೆಗಳ ಜೊತೆ ಸೇವಿಸಿದರೆ, ನಿಮ್ಮ ಮೂಳೆಗಳು ಉಕ್ಕಿನಂತೆ ಬಲಗೊಳ್ಳುತ್ತವೆ!

16/03/2026 7:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.