ಬೆಂಗಳೂರು: JDS-BJP ನಡುವೆ ಬಿರುಕು ಉಂಟಾಗಿದ್ದು, ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ನಡೆಸಲು ಮುಂದಾಗಿರುವ ಪಾದಾಯಾತ್ರೆಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯವರು ವಿರೋಧ ವ್ಯಕ್ತಪಡಿಸಿದ್ದಾರೆ.
ಅವರು ಇಂದು ಸುದ್ದಿಗಾರರ ಜೊತೆಗೆ ಮಾತನಾಡುತ್ತ, ದೇವೇಗೌಡರ ಕುಟುಂಬವನ್ನು ಸರ್ವನಾಶ ಮಾಡಲು ಹೊರಟಿರುವವನ್ನು ಪಕ್ಕದಲ್ಲಿ ಕೂರಿಸಿಕೊಂಡು ಮೀಟಿಂಗ್ ಮಾಡುತ್ತಾರೆ ಅಂಥ ಅವರು ಬಿಜೆಪಿ ನಾಯಕರ ವಿರುದ್ದ ಕಿಡಿಕಾರಿದರು.