ಬೆಂಗಳೂರು: ಹಾಲಿನ ಖರೀದಿ ದರದಲ್ಲಿ ₹1.50 ಕಡಿತ ಮಾಡಿರುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ಕೂಡಲೇ ಈ ಬಗ್ಗೆ ಮುಖ್ಯಮಂತ್ರಿಗಳು ಕ್ರಮ ವಹಿಸಿ ಹಾಲು ಖರೀದಿ ದರಕ್ಕೆ ತಡೆ ಒಡ್ಡಬೇಕು ಎಂದು ಆಗ್ರಹಿಸಿದ್ದಾರೆ.
ಅಧಿಕಾರ ದರ್ಪದ ಅಮಲಿನಿಂದ ಕೊಬ್ಬಿರುವ ರಾಜ್ಯ ಕಾಂಗ್ರೆಸ್ ಸರಕಾರ ಅನ್ನದಾತನ ಮೇಲೆ ಬರೆಯ ಬರೆ ಎಳೆಯುತ್ತಿದೆ. ರೈತನ ಜೀವನಾಧಾರವಾಗಿರುವ ಹಾಲಿನ ಮೇಲೆ ಕಾಂಗ್ರೆಸ್ ಆಡಳಿತದ ಕಾಕದೃಷ್ಟಿ ಬಿದ್ದಿದೆ. ಪರಿಣಾಮ; ಹಾಲಿನ ಖರೀದಿ ದರಕ್ಕೆ ಕತ್ತರಿ ಪ್ರಯೋಗವಾಗಿದೆ ಎಂದು ಸಚಿವರು ಕಟುವಾಗಿ ಟೀಕಿಸಿದ್ದಾರೆ.
ಕೆಲ ಹಾಲು ಒಕ್ಕೂಟಗಳು ಏಕಪಕ್ಷೀಯವಾಗಿ ಹಾಲಿನ ಖರೀದಿ ದರದಲ್ಲಿ ₹1.50 ಕಡಿತ ಮಾಡಿವೆ. ಹೊಸ ಖರೀದಿ ದರ ₹30.50 ರಿಂದ ₹29ಕ್ಕೆ ಕುಸಿದಿದೆ. ಕಾಮಧೇನುವನ್ನೇ ನಂಬಿದ್ದ ರೈತನ ಕರುಳಿಗೆ ಕೊಳ್ಳಿ ಬಿದ್ದಿದೆ. ನಮ್ಮದು ರೈತಪರ ಸರಕಾರ ಎನ್ನುವ ಮುಖ್ಯಮಂತ್ರಿಗಳು ಇತ್ತ ಗಮನ ಹರಿಸಬೇಕು. ಅವರಿಗೆ ಅಷ್ಟು ಸಮಯ ಇದೆ ಎಂದು ನಾನಾದರೂ ಪರಿಭಾವಿಸುತ್ತೇನೆ ಎಂದು ಅವರು ಹೇಳಿದ್ದಾರೆ.
267 ಅರಣ್ಯ ವೀಕ್ಷಕರಿಗೆ ನೇಮಕಾತಿ ಪತ್ರ ಹಸ್ತಾಂತರ: 50 ಅರಣ್ಯ ಸಿಬ್ಬಂದಿಗೆ ಮುಖ್ಯಮಂತ್ರಿಗಳ ಪದಕ ಪ್ರದಾನ
BIG NEWS: ‘ನರ್ಸಿಂಗ್ ಕಾಲೇಜು’ ಕಟ್ಟಡದಲ್ಲಿ ‘ಮತ್ತೊಂದು ಕೋರ್ಸ್’ ನಡೆಸುತ್ತಿದ್ದರೇ ‘ಮಾನ್ಯತೆ ರದ್ದು’