ಬೆಂಗಳೂರು: ನಗರದ ಜಾಲಹಳ್ಳಿಯಲ್ಲಿ ಹೆಚ್‌ಎಂಟಿ ಕಂಪನಿಗೆ ಸೇರಿದ ಐದು ಎಕರೆ ವಶಕ್ಕೆ ತೆಗೆದುಕೊಂಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.
ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು; ಹೆಚ್‌ಎಂಟಿ ಜಮೀನು ವಶ ವಿರುದ್ಧ ಕಾನೂನು ಹೋರಾಟ ಮಾಡಲಾಗುವುದು. ರಾಜ್ಯ ಸರ್ಕಾರಕ್ಕೆ ಹಿನ್ನೆಡೆ ಆಗುವುದು ಖಚಿತ ಎಂದರು.
ಶ್ರೀನಿವಾಸಪುರದಲ್ಲಿ ಮಾಜಿ ಸ್ಪೀಕರ್ ಒಬ್ಬರು ನೂರಾರು ಎಕರೆ ಅರಣ್ಯ ಭೂಮಿ ಲೂಟಿ ಹೊಡೆದಿದ್ದಾರಲ್ಲ, ಮೊದಲು ಅದರ ಬಗ್ಗೆ ನೋಡಲಿ ಸಚಿವ ಈಶ್ವರ್ ಖಂಡ್ರೆ ಅವರು. ಇದರ ಬಗ್ಗೆ ನ್ಯಾಯಾಲಯ ಕೊಟ್ಟಿರುವ ತೀರ್ಪು ಅನ್ನೇ ಕುರ್ಚಿ ಕೆಳಗೆ ಹಾಕಿಕೊಂಡು ಕೂತಿದ್ದಾರೆ. ಮೊದಲು ಇದನ್ನು ನೋಡಲಿ. ಎಷ್ಟು ಎಕರೆ ಲೂಟಿ ಆಗಿದೆ ಅಲ್ಲಿ ನೋಡಲಿ. ನಿನ್ನೆ ಐದು ಎಕರೆಗೆ ಬಲವಂತವಾಗಿ ಹೋಗಿ ಫೆನ್ಸಿಂಗ್ ಹಾಕಿಕೊಂಡಿದ್ದಾರೆ. ಕೋರ್ಟ್ ಆದೇಶಗಳಿಗೆ ಹೆಚ್‌ಎಂಟಿ ಹಾಗೂ ಅಧಿಕಾರಿಗಳು ತಲೆ ಬಾಗಬೇಕಾಗುತ್ತದೆ ಎಂದು ಅವರು ಹೇಳಿದರು.
ಕೆ.ಹೆಚ್.ಮುನಿಯಪ್ಪನವರೇ… ಕೊನೆ ಪಕ್ಷ ತಿನ್ನುವ ಅನ್ನವಾದರೂ ಸರಿಯಾಗಿ ಪೂರೈಸಿ: ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು ಜನತೆಗೆ ಗಮನಕ್ಕೆ: ಅ.27ರ ನಾಳೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut