ಬೆಂಗಳೂರು: ಕೇಂದ್ರ ಸಚಿವರಾಗಿ ಅಧಿಕಾರ ವಹಿಸಿಕೊಂಡು, ಜನಪರ ಕೆಲಸದಲ್ಲಿ ತೊಡಗಿರುವಂತ ಹೆಚ್.ಡಿ ಕುಮಾರಸ್ವಾಮಿ ಅವರು, ನಾಳೆ ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಚುನಾವಣೆಯಲ್ಲಿ ಗೆದ್ದು ಈಗ ಹೆಚ್.ಡಿ ಕುಮಾರಸ್ವಾಮಿ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾಗಿದ್ದಾರೆ. ಈ ಹಿನ್ನಲೆಯಲ್ಲಿ ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದು ಕಡ್ಡಾಯವಾಗಿದೆ. ಈ ಹಿನ್ನಲೆಯಲ್ಲಿ ನಾಳೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.
ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ
ಕೇಂದ್ರ ಸಚಿವರಾದ ಮೇಲೆ ಮೊದಲ ಬಾರಿಗೆ ರಾಜ್ಯಕ್ಕೆ ಭೇಟಿ ನೀಡಿರುವ ಕುಮಾರಸ್ವಾಮಿ ಅವರನ್ನು ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ವಿಮಾನ ನಿಲ್ದಾಣದಲ್ಲಿ ಅದ್ದೂರಿಯಾಗಿ ಸ್ವಾಗತಿಸಿದರು. ಬಳಿಕ ಸಾದಹಳ್ಳಿ ಗೇಟ್ ಟೋಲ್ ಬಳಿಗೆ ಆಗಮಿಸಿದ ಕೇಂದ್ರ ಸಚಿವರನ್ನು ಬೃಹತ್ ಸೇಬಿನ ಹಾರ, ಹೂವಿನ ಹಾರ ಹಾಕಿ ಸ್ವಾಗತ ಮಾಡಿದರು ಕಾರ್ಯಕರ್ತರು. ಪಕ್ಷದ ಕಚೇರಿಯಲ್ಲಿ ನಡೆದ ಅಭಿನಂದನಾ ಸಭೆಯಲ್ಲಿ ಜೆಡಿಎಸ್ ನಗರ ಘಟಕದ ಅಧ್ಯಕ್ಷರಾದ ಹೆಚ್.ಎಂ.ರಮೇಶ್ ಗೌಡ ಎಲ್ಲರನ್ನೂ ಸ್ವಾಗತಿಸಿದರು.
ಜೆಡಿಎಸ್ ರಾಜ್ಯ ಕೋರ್ ಕಮಿಟಿ ಅಧ್ಯಕ್ಷರಾದ ಜಿಟಿ ದೇವೆಗೌಡರು, ರಾಜ್ಯ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಸಂಸದ ಮಲ್ಲೇಶ್ ಬಾಬು, ಮಾಜಿ ಸಚಿವರಾದ ಅಲ್ಕೋಡ್ ಹನುಮಂತಪ್ಪ, ಹೆಚ್.ಕೆ.ಕುಮಾರಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕಿ ಶಾರದಾ ಪೂರ್ಯ ನಾಯಕ್, ಶಾಸಕರಾದ ಎ.ಮಂಜು, ಸಮೃದ್ಧಿ ಮಂಜುನಾಥ್, ಸಿ.ಎನ್.ಬಾಲಕೃಷ್ಣ, ಕರೆಮ್ಮ ನಾಯಕ್, ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ಇಂಚರ ಗೋವಿಂದರಾಜು, ಮಾಜಿ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ, ಪ್ರಸನ್ನ ಕುಮಾರ, ದೊಡ್ಡನಗೌಡ ಪಾಟೀಲ್, ವೈ ಎಸ್ ವಿ ದತ್ತಾ, ಚೌಡರೆಡ್ಡಿ ತೂಪಲ್ಲಿ, ರಾಜ್ಯ ಮಹಿಳಾ ಜನತಾದಳ ಅಧ್ಯಕ್ಷೆ ರಶ್ಮಿ ರಾಮೇಗೌಡ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.
ನನ್ನ ವಿರುದ್ಧ ರಾಜ್ಯ ‘ಕಾಂಗ್ರೆಸ್ ಸರ್ಕಾರ’ದಿಂದ ಒಳಸಂಚು: ‘HD ಕುಮಾರಸ್ವಾಮಿ’ ಗಂಭೀರ ಆರೋಪ