ಬೆಂಗಳೂರು: ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಕಾರಣದಿಂದಾಗಿ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿರುವುದಾಗಿ ಹೇಳಲಾಗುತ್ತಿದೆ.
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಕಳೆದ ಕೆಲವು ದಿನಗಳಿಂದ ತೀವ್ರ ಜ್ವರ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದರು. ಈ ಹಿನ್ನಲೆಯಲ್ಲಿ ವೈದ್ಯರ ಸೂಚನೆಯ ಮೇರೆಗೆ ಇಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರಿನ ಜಯನಗರದಲ್ಲಿರುವಂತ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಅಂದಹಾಗೇ ನಿರಂತರ ಪ್ರವಾಸ ಹಾಗೂ ಕೆಲಸದ ಒತ್ತಡದಿಂದ ಅವರು ಆಯಾಸಕ್ಕೆ ಒಳಗಾಗಿ ಅನಾರೋಗ್ಯಕ್ಕೆ ಈಡಾಗಿದ್ದಾರೆ ಎಂಬುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ಸದಸ್ಯ ಅಪೋಲೋ ಆಸ್ಪತ್ರೆಯ ವೈದ್ಯರಿಂದ ಹೆಚ್.ಡಿ ಕುಮಾರಸ್ವಾಮಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಯಾರೂ ಭಯಪಡಬೇಕಾಗಿಲ್ಲ ಎಂಬುದಾಗಿಯೂ ಹೇಳಿದ್ದಾರೆ.
ಇನ್ನೂ ಅನಾರೋಗ್ಯದಿಂದ ಆಸ್ಪತ್ರೆಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ದಾಖಲಾದ ಕಾರಣ ಅವರ ಈ ವಾರದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿರೋದಾಗಿ ಹೇಳಲಾಗುತ್ತಿದೆ. ಚಿಕಿತ್ಸೆ ಬಳಿಕ ಬುಧವಾರ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗೋ ಸಾಧ್ಯತೆ ಇದೆ ಎಂಬುದಾಗಿ ತಿಳಿದು ಬಂದಿದೆ.
Health Alert: ಸಾರ್ವಜನಿಕರೇ ಎಚ್ಚರ.! ಇವು ಭವಿಷ್ಯದಲ್ಲಿ ಕೊರೋನಾ ಹೊರತಾಗಿ ನಲುಗಿಸುವ ‘8 ಸಾಂಕ್ರಾಮಿಕ ರೋಗ’ಗಳು